ಬೆಂಗಳೂರು: ಅತ್ತ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ನಿವಾಸ ಮೇಲೆ ಇಡಿ ದಾಳಿ ನಡೆಯುತ್ತಿದ್ದಂತೆ ಇತ್ತ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ರಾಜರಾಜೇಶ್ವರಿನಗರದ ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ಇಡಿ ದಾಳಿ ನಡೆಸಿದೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಬೆಳಗ್ಗೆಯಿಂದಲೇ ಇಡಿ ಶೋಧ ಆರಂಭಿಸಿದೆ.
16 ಕಡೆ ಇಡಿ ದಾಳಿ
ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಗೋವಾ ಸೇರಿದಂತೆ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರಿಗೆ ಸೇರಿದ ಚಿತ್ರದುರ್ಗ ಮತ್ತು ಬೆಂಗಳೂರಿನ ಪ್ರೆಸ್ಟೀಜ್ ಎಡ್ವರ್ಡಿಯನ್ ಅಪಾರ್ಟ್ಮೆಂಟ್ ಫ್ಲಾಟ್ ಸೇರಿದಂತೆ ನಾಲ್ಕು ಮನೆಗಳ ಮೇಲೆ ಇಡಿ ತಂಡ ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆ, ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ.