ಯುಟಿ ಖಾದರ್ 
ರಾಜ್ಯ

ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ತೆರೆ: ಒಟ್ಟು 39 ಮಸೂದೆ ಅಂಗೀಕಾರ

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ.

ಬೆಂಗಳೂರು: ಎರಡು ವಾರಗಳ ಕಾಲ ನಡೆದ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ಶುಕ್ರವಾರ ಅಧಿಕೃತವಾಗಿ ತೆರೆ ಬಿದಿದ್ದು, ಪ್ರತಿಪಕ್ಷಗಳ ವಿರೋಧದ ನಡವೆಯೇ ಒಟ್ಟು 39 ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು, ಕಳೆದ 9 ದಿನಗಳಲ್ಲಿ ಒಟ್ಟು 70 ಗಂಟೆಗಳ ಕಾಲ ಅಧಿವೇಶನ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮಸೂದೆಗಳ ಮಂಡನೆ ಮಾಡಿ, ಅನುಮೋದನೆ ನೀಡಲಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಆಡಳಿತ ಮತ್ತು ವಿಪಕ್ಷಗಳ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸ್ಪೀಕರ್ ತಿಳಿಸಿದ್ದಾರೆ.

ಈ ಮೊದಲು ಅಧಿವೇಶನಗಳಲ್ಲಿ ಸುಮಾರು 20 ವಿಧೇಯಕಗಳ ಮಂಡನೆಯಾಗುತ್ತಿದ್ದವು. ಆದರೆ ಈ ಬಾರಿಯ ಅಧಿವೇಶನ‌‌ದ‌ಲ್ಲಿ ಅದಕ್ಕೂ ಎರಡು ಪಟ್ಟು ವಿಧೇಯಕಗಳ ಮಂಡನೆ ಮಾಡಿ ಅವುಗಳಿಗೆ ಅನುಮೋದನೆ ಪಡೆದದ್ದು ದಾಖಲೆಯಾಗಿದೆ.

ಮುಂಗಾರು ಅಧಿವೇಶನದಲ್ಲಿ ಒಟ್ಟು 2,306 ಪ್ರಶ್ನೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,199 ಪ್ರಶ್ನೆಗಳನ್ನು ಅಂಗೀಕರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!