ಸೋನಿಯಾ ಗಾಂಧಿ - ಸಿದ್ದರಾಮಯ್ಯ 
ರಾಜ್ಯ

ಸೋನಿಯಾ ಗಾಂಧಿಯಿಂದ ಮೈಸೂರು ದಸರಾ ಉದ್ಘಾಟನೆ ಒಂದು ಸುಳ್ಳು ಸುದ್ದಿ: CMO ಸ್ಪಷ್ಟನೆ

ಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟನೆ ನೀಡಿದೆ. ಈ ಮೂಲಕ ಅಂತೆ ಕಂತೆಗಳಿಗೆ ತೆರೆ ಎಳೆಯಲಾಗಿದೆ.

ಮೈಸೂರು ದಸರಾವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಂದ ಉದ್ಘಾಟಿಸಲು ಸಿಎಂ ಸಿದ್ದರಾಮಯ್ಯ ಬಯಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಆದರೆ, ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಖುದ್ದು ಸಿಎಂ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡುವ ಸಾಧ್ಯತೆಗಳಿವೆ ಎಂದು ವರದಿ ಮಾಡಲಾಗಿತ್ತು.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಶುರುವಾಗಿದ್ದು, ರಾಜ್ಯ ಸರ್ಕಾರದ ನಡೆಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಸಿಎಂ ಕಚೇರಿ ಸ್ಪಷ್ಟನೆ ನೀಡಿದ್ದು, ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

'ಅದು ಮಾನವೀಯ ಕೆಲಸ.. ನಾವು ಸರಿಯಾದ್ದನ್ನೇ ಮಾಡಿದ್ದೆವು': Iran ನೌಕೆಗೆ ಪ್ರವೇಶ ನೀಡಿದ ಕುರಿತು EAM Jaishankar ಹೇಳಿಕೆ!

ರಾಹುಲ್ ಗಾಂಧಿ ರಾಜಕೀಯಕ್ಕೆ ಬರದಿದ್ದರೆ ಏನು ಮಾಡುತ್ತಿದ್ದರು ಗೊತ್ತಾ? ಇಲ್ಲಿದೆ ಅಚ್ಚರಿಯ ಉತ್ತರ

ಯುಪಿ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶ

ಕೊಚ್ಚಿಯ ಬಂದರಿನಲ್ಲಿ ಇರಾನಿನ ನೌಕಾ ಹಡಗು ನಿಲ್ಲಿಸಲು ಅನುಮತಿ: ಎಸ್. ಜೈಶಂಕರ್ ಹೇಳಿದ್ದು ಏನು?

SCROLL FOR NEXT