ಡಿ.ಕೆ.ಶಿವಕುಮಾರ್ 
ರಾಜ್ಯ

ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಆಯೋಗಕ್ಕೆ ಪತ್ರ; ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ: ಡಿಕೆಶಿ

15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಟಿ.ಎನ್ ಜವರಾಯಿ ಗೌಡ ಅವರು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಜಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಉತ್ತರಿಸಿದರು.

“15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ. 18-08-2025ರ ವರೆಗೂ ಒಂದು ತಿಂಗಳ ಕಾಲ ಆಕ್ಷೇಪ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಸರಹಳ್ಳಿ, ಆರ್ ಆರ್ ನಗರ, ಪದ್ಮನಾಭ ನಗರ, ಮಹದೇವಪುರ, ಯಶವಂತಪುರ ಕೆಲವು ವಿಧಾನಸಭಾ ಕ್ಷೇತ್ರಗಳು ಭಾಗ ಆಗಿವೆ ನಿಜ. ಇನ್ನು ಕೆಲವು ಪ್ರದೇಶಗಳನ್ನು ಮುಂದಿನ ದಿನಗಳಲ್ಲಿ ಸೇರಿಸಬೇಕಿದೆ" ಎಂದು ತಿಳಿಸಿದರು.

"ವಾರ್ಡ್ ಗಳ ಪುನರ್ ವಿಂಗಡಣೆ 01-11-2025ಕ್ಕೆ ನಡೆಯಲಿದೆ. ಇದಕ್ಕಾಗಿ ಪಾಲಿಕೆಯಲ್ಲಿ ಆಯುಕ್ತರ ನೇತೃತ್ವದ ಪ್ರತ್ಯೇಕ ತಂಡ ಇದೆ. ನಾವು ನ್ಯಾಯಾಲಯಕ್ಕೆ ಕಾಲ ಮಿತಿಯಲ್ಲಿ ಅಫಿಡವಿಟ್ ಸಲ್ಲಿಸಿದ್ದೇವೆ. ಇನ್ನು ವಾರ್ಡ್ ಗಳ ರಚನೆ ಬಗ್ಗೆ ಪುನರ್ ವಿಂಗಡಣೆ ಬಳಿಕ ಅಧಿಸೂಚನೆ ಹೊರಡಿಸಲಾಗುವುದು" ಎಂದು ವಿವರಿಸಿದರು. ಆದಷ್ಟು ಬೇಗ ಚುನಾವಣೆ ನಡೆಸಿ ಎಂದು ಸದಸ್ಯರ ಮನವಿಗೆ ಸ್ಪಂದಿಸಿದ ಸಚಿವರು, "ಮಾನ್ಯ ಸದಸ್ಯರ ಸಲಹೆಯನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇವೆ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT