ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರ 
ರಾಜ್ಯ

ಧರ್ಮಸ್ಥಳ ಕೇಸ್: ಸುಳ್ಳು ಮಾಹಿತಿ ನೀಡುತ್ತಿದ್ದ ವಕೀಲ ಮಂಜುನಾಥ್'ಗೆ ಸಂಕಷ್ಟ, FIR ದಾಖಲು

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಮಂಜುನಾಥ್​ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ವಿಚಾರವಾಗಿ ಸುಳ್ಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಆರೋಪದ ಮೇಲೆ ವಕೀಲ ಮಂಜುನಾಥ್ ಎನ್ ವಿರುದ್ಧ ಪ್ರಕರಣ ದಾಖಲಾಗಿದೆ,

ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ನೀಡಿದ ದೂರು ಆಧರಿಸಿ ಎಫ್​ಐಆರ್ ದಾಖಲಾಗಿದೆ. ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಮಂಜುನಾಥ್​ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ಪಾಯಿಂಟ್ ನಂಬರ್ 1ರಲ್ಲಿ 2 ಹೆಣ, ಪಾಯಿಂಟ್ ನಂ 2, 3ರಲ್ಲಿ ತಲಾ 2 ಹೆಣ‌, ಪಾಯಿಂಟ್ ನಂಬರ್‌ 4 ಮತ್ತು 5ರಲ್ಲಿ ತಲಾ 6 ಹೆಣ, ಪಾಯಿಂಟ್ ನಂಬರ್​ 6, 7ರಲ್ಲಿ ತಲಾ 8 ಹೆಣ, ಪಾಯಿಂಟ್​ ನಂಬರ್ 9ರಲ್ಲಿ 6-7 ಹೆಣ, ಪಾಯಿಂಟ್ ನಂಬರ್ 10ರಲ್ಲಿ 3, 11ರಲ್ಲಿ 9 ಹೆಣ, ಪಾಯಿಂಟ್ ನಂಬರ್​ ​12ರಲ್ಲಿ 4-5 ಹೆಣ ಪಾಯಿಂಟ್ ನಂ 13ರಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ಈ ಸಂಬಂಧ ಧರ್ಮಸ್ಥಳ ನಿವಾಸಿ ರಘುರಾಮ್ ಶೆಟ್ಟಿ (44) ಅವರು ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ, ಬಿಎನ್​ಎಸ್​ ಕಾಯ್ದೆ 353(1)ಬಿ, 353(2)ರ ಅಡಿ ಎಫ್ಐಆರ್‌ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT