ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಬಂಧನವಾಗಿರುವುದು ನಿಜ, ಸತ್ಯ ಹೊರತರುವುದಕ್ಕಾಗಿಯೇ SIT ರಚಿಸಿದ್ದೇವೆ; ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ.

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿ ವ್ಯಕ್ತಿಯ ಬಂಧನವಾಗಿರುವುದು ನಿಜ. ಸತ್ಯವನ್ನು ಹೊರತರುವುದಕ್ಕಾಗಿಯೇ ನಮ್ಮ ಸರ್ಕಾರ ಎಸ್‌ಐಟಿ ರಚಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ. ಬಂಧನ ಆಗಿರುವುದಂತೂ ಖಚಿತ ಎಂದು ಹೇಳಿದರು.

ಸಾಕ್ಷಿ ದೂರುದಾರನ ದೂರು ಆಧರಿಸಿಯೇ ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಸದ್ಯ ಎಸ್‌ಐಟಿ ತನಿಖೆ ಮುಂದುವರಿದಿದೆ. ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೆ ಯಾವ ಮಾಹಿತಿಯನ್ನೂ ಹಂಚಿಕೊಳ್ಳಲು ಸಾಧ್ಯವಿಲ್ಲ. ಜೊತೆಗೆ ಅದರ ಬಗ್ಗೆ ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದರ ಹಿಂದೆ ದೊಡ್ಡ ಜಾಲ ಇದೆ ಎಂಬ ಬಗ್ಗೆಯೂ ಆರೋಪ ಕೇಳಿಬಂದಿದೆ. ಇದೂ ಕೂಡ ಪತ್ತೆಯಾಗಬೇಕಲ್ಲವೇ? ಜಾಲವಿದೆಯೇ? ಇಲ್ಲವೇ ಎಂಬ ಬಗ್ಗೆಯೂ ವರದಿ ಬಂದ ಬಳಿಕವಷ್ಟೇ ನನಗೆ ಉತ್ತರಿಸಲು ಸಾಧ್ಯ. ಅಲ್ಲಿಯವರೆಗೂ ಊಹಾಪೋಹಾಗಳು ಮಾತ್ರ ಇರುತ್ತದೆ ಎಂದರು.

ದೂರುದಾರನ ಬಂಧನದಿಂದ ಎಸ್‌ಐಟಿ ತನಿಖೆ ನಿಲ್ಲುತ್ತದೆ ಎಂಬುದರ ಬಗ್ಗೆ ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಸುಜಾತ ಭಟ್‌ ಅವರ ಪ್ರಕರಣದ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಹಾಗಾಗಿ, ಯಾವುದೇ ವಿಚಾರವನ್ನು ಈಗ ಹೇಳುವುದಕ್ಕೆ ಸಾಧ್ಯವಿಲ್ಲ. ಎಲ್ಲ ಮಾಹಿತಿಯನ್ನು ಹಂಚಿಕೊಂಡಲ್ಲಿ ತನಿಖೆಗೆ ತೊಡಕಾಗುತ್ತದೆ. ಬಿಜೆಪಿಯವರು ಆರೋಪ ಮಾಡುತ್ತಲೇ ಇರುತ್ತಾರೆ. ಬೇರೆ ಬೇರೆಯವರ ಹೇಳಿಕೆಗಳನ್ನೂ ಗಮನಿಸಿದ್ದೇನೆ. ಎಲ್ಲ ಹೇಳಿಕೆಗಳ ಆಧಾರದ ಮೇಲೆ ನಾವು ಯಾವ ನಿರ್ಣಯವೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಸಾಕ್ಷಿ ದೂರುದಾರನನ್ನು ಸಂಶಯದಿಂದ ಬಂಧಿಸಲಾಗಿದೆಯೇ ಅಥವಾ ಯಾವ ಸೆಕ್ಷನ್‌ಗಳ ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬುದು ಎಲ್ಲವೂ ಎಸ್‌ಐಟಿ ತನಿಖೆಗೆ ಬಿಟ್ಟದ್ದು. ಬಂಧಿಸಿರುವುದಂತೂ ಖಚಿತ. ಸತ್ಯವನ್ನು ಹೊರತರುವುದಷ್ಟೇ ಎಸ್‌ಐಟಿ ಕೆಲಸ. ದೂರುದಾರನ ಮಂಪರು ಪರೀಕ್ಷೆ ಮಾಡಬೇಕೋ ಬೇಡವೋ ಎಂಬುದು ಎಸ್‌ಐಟಿ ಮುಖ್ಯಸ್ಥರಿಗೆ ಬಿಟ್ಟದ್ದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

Hong Kong ಅಗ್ನಿ ಪ್ರಮಾದ: ಮೂವರ ಬಂಧನ; 55 ಮಂದಿಯ ಜೀವ ತೆಗೆಯಿತಾ ಸಿಗರೇಟ್ ಕಿಡಿ? ವೈರಲ್ ಆಗಿರುವ ವಿಡಿಯೋದಲ್ಲೇನಿದೆ?

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ

LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?

SCROLL FOR NEXT