ವೀರೇಂದ್ರ ಹೆಗ್ಗಡೆ 
ರಾಜ್ಯ

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಬಂಧನ; ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದು ಏನು?

ಧರ್ಮಸ್ಥಳದ ವಿರುದ್ಧ ಆಧಾರವಿಲ್ಲದ ಆರೋಪ ಮಾಡಲಾಗುತ್ತಿದೆ. ಇದರಿಂದ ದೊಡ್ಡ ಪ್ರಮಾಣದ ಭಕ್ತರು ಮತ್ತು ಸಮುದಾಯದಲ್ಲಿ ಕಳವಳ ಉಂಟಾಗಿದೆ.

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ( SIT)ಅಧಿಕಾರಿಗಳು ಬಂಧಿಸಿರುವುದನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದ್ದಾರೆ.

ಅನಾಮಿಕ ದೂರುದಾರನನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಿದ ನಂತರ ಮಾತನಾಡಿದ ವಿರೇಂದ್ರ ಹೆಗ್ಗಡೆ ಅವರು, ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳದ ವಿರುದ್ಧ ಆಧಾರವಿಲ್ಲದ ಆರೋಪ ಮಾಡಲಾಗುತ್ತಿದೆ. ಇದರಿಂದ ದೊಡ್ಡ ಪ್ರಮಾಣದ ಭಕ್ತರು ಮತ್ತು ಸಮುದಾಯದಲ್ಲಿ ಕಳವಳ ಉಂಟಾಗಿದೆ. ಇದೀಗ ದೂರುದಾರ ಬಂಧನದಿಂದ ಸತ್ಯಾಂಶ ಹೊರ ಬಂದು, ನ್ಯಾಯ ಸಿಗುವ ನಂಬಿಕೆ ಇದೆ ಎಂದಿದ್ದಾರೆ.

ಈ ಹೇಳಿಕೆಯ ಮೂಲಕ ವಿಶೇಷ ತನಿಖಾ ದಳದ (SIT) ತನಿಖೆಯಲ್ಲಿ ಆರೋಪಗಳ ದುರುದ್ದೇಶಪೂರಿತ ಸ್ವರೂಪ ಬಯಲಾಗುತ್ತಿದೆ ಎಂದು ಸೂಚಿಸಿದ್ದಾರೆ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದಿದ್ದಾರೆ. ಅಲ್ಲದೇ ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮಾಜಿ ನೈರ್ಮಲ್ಯ ಕೆಲಸಗಾರನಾಗಿದ್ದ ದೂರುದಾರನು ನೀಡಿದ ಹೇಳಿಕೆಗಳು ಮತ್ತು ದಾಖಲೆಗಳಲ್ಲಿ ಅಸಂಗತತೆ ಕಂಡುಬಂದ ನಂತರ ಸುಳ್ಳು ಸಾಕ್ಷ್ಯ ನುಡಿದ ಆರೋಪದ ಮೇಲೆ ಆತನನ್ನು ಶನಿವಾರ ಬಂಧಿಸಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇಲ್ಲಿಯವರೆಗೆ ಮುಖವಾಡ ಧರಿಸಿ ಸಮಿತಿಯ ಮುಂದೆ ಹಾಜರಾದ ದೂರುದಾರನನ್ನು ಸಿ ಎನ್ ಚಿನ್ನಯ್ಯ ಎಂದು ಗುರುತಿಸಲಾಗಿದೆ. ಹಲವಾರು ಗಂಟೆಗಳ ವಿಚಾರಣೆಯ ನಂತರ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ವಿಜಯೇಂದ್ರ ಅವರ ಮುಂದೆ ಹಾಜರುಪಡಿಸಲಾಯಿತು ಮತ್ತು ಹೆಚ್ಚಿನ ತನಿಖೆಗಾಗಿ ಎಸ್‌ಐಟಿ 10 ದಿನಗಳ ಕಸ್ಟಡಿಗೆ ಕೋರಿತು. ನ್ಯಾಯಾಲಯವು ವಿನಂತಿಯನ್ನು ಪುರಸ್ಕರಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT