ಡಾ. ಕೆ. ಸುಧಾಕರ್ 
ರಾಜ್ಯ

ಜರ್ಮನಿಯಲ್ಲಿ G-CAP 2025: ಭಾರತದ ಪ್ರತಿನಿಧಿಯಾಗಿ ಡಾ. ಕೆ.ಸುಧಾಕರ್ ಗೆ ಆಹ್ವಾನ

ಯುನೈಟೆಡ್ ನೇಷನ್ಸ್ ಸಿಸ್ಟಮ್ ಸ್ಟಾಫ್ ಕಾಲೇಜ್, ಯುನೈಟೆಡ್ ನೇಷನ್ಸ್ ಕನ್ವೆನ್ಶನ್ ಟು ಕಾಂಬ್ಯಾಟ್ ಡೆಸರ್ಟಿಫಿಕೇಶನ್ (UNCCD)ಮತ್ತು G20 ಗ್ಲೋಬಲ್ ಲ್ಯಾಂಡ್ ಇನಿಶಿಯೇಟಿವ್ ಸಂಯುಕ್ತಾಶ್ರಯದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ.

ಚಿಕ್ಕಬಳ್ಳಾಪುರ: ಜರ್ಮನಿಯ ಬಾನ್‌ನಲ್ಲಿ ಆಗಸ್ಟ್ 24 ರಿಂದ 29 ರವರೆಗೆ ನಡೆಯಲಿರುವ ಪ್ರತಿಷ್ಠಿತ ಗ್ಲೋಬಲ್ ಚೇಂಜ್ ಮೇಕರ್ ಅಕಾಡೆಮಿ ಫಾರ್ ಪಾರ್ಲಿಮೆಂಟೇರಿಯನ್ಸ್ (G-CAP 2025) ರಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರಿಗೆ ಆಹ್ವಾನ ನೀಡಲಾಗಿದೆ.

ಯುನೈಟೆಡ್ ನೇಷನ್ಸ್ ಸಿಸ್ಟಮ್ ಸ್ಟಾಫ್ ಕಾಲೇಜ್, ಯುನೈಟೆಡ್ ನೇಷನ್ಸ್ ಕನ್ವೆನ್ಶನ್ ಟು ಕಾಂಬ್ಯಾಟ್ ಡೆಸರ್ಟಿಫಿಕೇಶನ್ (UNCCD)ಮತ್ತು G20 ಗ್ಲೋಬಲ್ ಲ್ಯಾಂಡ್ ಇನಿಶಿಯೇಟಿವ್ ಸಂಯುಕ್ತಾಶ್ರಯದಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ.

ಸುಸ್ಥಿರ ಅಭಿವೃದ್ಧಿ, ಭೂ ರಕ್ಷಣೆ, ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ನೀತಿಗಳ ಆವಿಷ್ಕಾರದಂತಹ ನಿರ್ಣಾಯಕ ವಿಷಯಗಳ ಕುರಿತು ಚರ್ಚಿಸಲು ವಿಶ್ವದಾದ್ಯಂತ ಆಯ್ದು ಜನಪ್ರತಿನಿಧಿಗಳನ್ನು ಒಟ್ಟುಗೂಡಿಸುವುದು ಈ ಸಮಾವೇಶದ ಗುರಿಯಾಗಿದೆ.

ಪರಿಸರ ಸಂರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಗ್ರಾಮೀಣ ಅಭಿವೃದ್ಧಿ ಮತ್ತು ಸುಸ್ಥಿರ ಕೃಷಿಯಂತಹ ಕ್ಷೇತ್ರಗಳಲ್ಲಿ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಂಸದ ಡಾ. ಕೆ. ಸುಧಾಕರ್ ಅವರನ್ನು ಈ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಅವರು ಈ ಆಹ್ವಾನ ಪಡೆದ ಭಾರತದ ಏಕೈಕ ಸಂಸತ್ ಸದಸ್ಯರಾಗಿದ್ದಾರೆ.

ಜರ್ಮನಿ ಭೇಟಿ ಕುರಿತು ಮಾತನಾಡಿರುವ ಡಾ. ಕೆ.ಸುಧಾಕರ್, ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವುದು ಬಹಳ ಹೆಮ್ಮೆಯ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತವು ಹವಾಮಾನ ನಿರ್ವಹಣೆ, ಭೂ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ವಿಷಯಗಳಲ್ಲಿ ಮಹತ್ವಕಾಂಕ್ಷೆಯ ಗುರಿಗಳನ್ನು ಹೊಂದಿದೆ.

ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆಯಿಂದ ಆರಂಭವಾಗಿ ಅರಣ್ಯೀಕರಣದ ಕಾರ್ಯಕ್ರಮಗಳವರೆಗೂ ನಮ್ಮ ಸರ್ಕಾರದ ಯಶಸ್ಸಿನ ಗಾಥೆಯನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. ಬಂಜರು ಭೂಮಿ ಮತ್ತು ಹವಾಮಾನ ಬದಲಾವಣೆಯ ವಿರುದ್ಧ ಭಾರತದ ಹೋರಾಟವನ್ನು ಮತ್ತಷ್ಟು ಬಲಪಡಿಸಲು, ಜಾಗತಿಕ ಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿರುವ ಅತ್ಯುತ್ತಮ ಕ್ರಮಗಳನ್ನು ಕಲಿಯಲು ಇದು ಸಹಾಯಕವಾಗಿದೆ ಎಂದು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ (SDG) ಕೊಡುಗೆ ನೀಡುವ ಪರಿಣಾಮಕಾರಿ ನೀತಿಗಳನ್ನು ರೂಪಿಸಲು ಸಂಸದರಿಗೆ ಗ್ಲೋಬಲ್ ಚೇಂಜ್‌ ಮೇಕರ್ ಅಕಾಡೆಮಿ ನೆರವಾಗುತ್ತದೆ. ಈ ಕುರಿತು ಅಕಾಡೆಮಿಯು ಸಂಸದರಿಗೆ ಜ್ಞಾನ ಮತ್ತು ಸಾಧನಗಳ ಸಹಾಯ ಒದಗಿಸುತ್ತದೆ. ಪ್ರಮುಖವಾಗಿ ಭೂ ರಕ್ಷಣೆ, ಹವಾಮಾನ ನಿರ್ವಹಣೆ ಮತ್ತು ಜನ ಸಮುದಾಯಗಳು ಪರಿಸರಕ್ಕೆ ತಕ್ಕಂತೆ ಹೊಂದಿಕೊಂಡು ಬದುಕುವ ಬಗ್ಗೆ ಮಾಹಿತಿ ನೀಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT