ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನ 
ರಾಜ್ಯ

ಧರ್ಮಸ್ಥಳ ಪ್ರಕರಣ: ಅನಾಮಿಕನ ಗುರುತು ಬಹಿರಂಗ, ಕೋರ್ಟ್ ಗೆ ಹಾಜರುಪಡಿಸಿದ SIT ಅಧಿಕಾರಿಗಳು

ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಇಂದು ಬೆಳಗ್ಗೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ.

ಬೆಳ್ತಂಗಡಿ: ರಾಜ್ಯದ ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರವಾಗಿರುವ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಹೊಂದಿರುವ ಧರ್ಮಸ್ಥಳ ಸುತ್ತಮುತ್ತ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿಯೊಬ್ಬ ಹೇಳಿ ಪ್ರಕರಣವನ್ನು ರಾಜ್ಯಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿ ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಆತನ ಸಮ್ಮುಖದಲ್ಲಿಯೇ ಹುಡುಕಾಟ ನಡೆಸಿತ್ತು.

ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಇಂದು ಬೆಳಗ್ಗೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್​ಗೆ ಮಾಸ್ಕ್​ಮ್ಯಾನ್​ ನನ್ನ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ.

ಇಷ್ಟು ದಿನ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಮುಖವಾಡವನ್ನು ತೆಗೆಯಲಾಗಿದ್ದು ಗುರುತು ಬಹಿರಂಗಪಡಿಸಲಾಗಿದೆ.

ಬೆಳ್ತಂಗಡಿಗೆ ಕರೆತಂದ ಅಧಿಕಾರಿಗಳು

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್​ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆದಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಮಾಸ್ಕ್​ಮ್ಯಾನ್​ ಆರೋಪದ ಬಗ್ಗೆ ಎಸ್​​ಐಟಿ ಅಧಿಕಾರಿಗಳು ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯನನ್ನು ತನಿಖೆ ಮಾಡಿದ್ದರು. ಐಪಿಎಸ್‌ ಅಧಿಕಾರಿ ಪ್ರಣವ್ ಮೊಹಂತಿ ಕೂಡ ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್​ಮ್ಯಾನ್​ ವಿಚಾರಣೆ ಮಾಡಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಬಂಧಿಸಲಾಗಿದೆ.

ಬಂಧನಕ್ಕೆ ಕಾರಣ

ಅನಾಮಿಕ ದೂರುದಾರನು ನೀಡಿದ ಮಾಹಿತಿ ಮತ್ತು ತನಿಖೆ ನಂತರ ದೊರೆತ ವಾಸ್ತವಾಂಶಗಳ ನಡುವೆ ಭಾರಿ ವೈರುಧ್ಯಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಎಸ್‌ಐಟಿಯು ಈ ವ್ಯಕ್ತಿ ಸುಳ್ಳು ಮಾಹಿತಿ ನೀಡಿದ್ದಾನೆ, ತಪ್ಪು ದೂರು ಕೊಟ್ಟಿದ್ದಾನೆ ಮತ್ತು ತನಿಖೆಗೆ ಅಡ್ಡಿಪಡಿಸಿದ್ದಾನೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP