Banu Mushtaq
ರಾಜ್ಯ

ಇಸ್ಲಾಂನಲ್ಲಿ ಅಲ್ಲಾ ಬಿಟ್ಟರೆ ಬೇರೆ ದೇವರಿಲ್ಲ; ಚಾಮುಂಡಿಯನ್ನು ದೇವತೆ ಅಂತ ಬಾನು ಮುಷ್ತಾಕ್ ಒಪ್ಪುತ್ತಾರಾ?: ಪ್ರತಾಪ್ ಸಿಂಹ ಪ್ರಶ್ನೆ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushtaq) ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಭಾನು ಮುಷ್ತಾಕ್ ಆಯ್ಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸಬೇಕು. ಭಾನು ಅವರು ಮುಸ್ಲಿಂ ಆಗಿರುವುದರಿಂದ ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದೆಡೆ ಪ್ರತಾಪ್ ಸಿಂಹ (Pratap simha) ಮಾತನಾಡಿ, ಇಸ್ಲಾಂ ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲಎನ್ನುತ್ತದೆ . ಹಾಗಾದರೆ ಬಾನು ಮುಷ್ತಾಕ್‌ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ ಎಂದು ಪ್ರಶ್ನಿಸಿದರು. ಇನ್ನು ಬಾನು ಮುಷ್ತಾಕ್ ಬೂಕರ್ ಪ್ರಶಸ್ತಿ ಪಡೆದಿರುವುದಕ್ಕೆ ಅವರನ್ನು ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಮಾಡಿ, ಆದರೆ ಧಾರ್ಮಿಕ ನಂಬಿಕೆ ಮತ್ತು ಆಚರಣೆಯ ಪ್ರತೀಕವಾಗಿರುವ ದಸರಾ ಉದ್ಘಾಟನೆಗೆ ಕರೆಯುವುದು ಸೂಕ್ತವಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಸಿಟಿ ರವಿ ಸಹ ಮಾತನಾಡಿದ್ದು ಚಾಮುಂಡಿ ತಾಯಿ ಮೇಲೆ ನಂಬಿಕೆ, ಭಕ್ತಿ ಇದ್ದರೆ ಅವರು ಉದ್ಘಾಟಿಸುತ್ತಾರೆ ಈ ಬಗ್ಗೆ ನಾನೇನು ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT