ಸಾಂಕೇತಿಕ ಚಿತ್ರ online desk
ರಾಜ್ಯ

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ: ಶಾಲೆಯ ಒತ್ತಡವೇ ಕಾರಣ ಎಂದ ಕುಟುಂಬಸ್ಥರು

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಬೆಂಗಳೂರು: ನೇಣು ಬಿಗಿದು 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಲಕಿ ಖಾಸಗಿ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಶುಕ್ರವಾರ ಸಂಜೆ 6.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.

ಶಾಲೆಯಲ್ಲಿ ಅತೀವ್ರ ಕೆಲಸ ಕೊಡುತ್ತಿದ್ದು, ಇದರಿಂದಾಗಿ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆದರೆ,ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ಅವರು ಆರೋಪವನ್ನು ನಿರಾಕರಿಸಿದ್ದಾರೆ. ನಾವು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೆಚ್ಚುವರಿ ತರಗತಿಗಳನ್ನು ನಡೆಸುತ್ತಿದ್ದೇವೆ. ಹೋಂವರ್ಕ್ ಕುರಿತು ಶಿಕ್ಷಕರಿಂದ ಯಾವುದೇ ಬಲವಂತ ಅಥವಾ ಕಿರುಕುಳವಿಲ್ಲ. ಕುಸುಮಾ ಒಳ್ಳೆಯ ವಿದ್ಯಾರ್ಥಿನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಹೇಳಿದ್ದ ಕೆಲಸವನ್ನು ಮಾಡುತ್ತಿದ್ದಳು, ಶೈಕ್ಷಣಿಕವಾಗಿ ಉತ್ತಮವಾಗಿದ್ದಳು ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಮದನಾಯಕನಹಳ್ಳಿ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ