Sujatha Bhat 
ರಾಜ್ಯ

ಮನೆ ಬಳಿ ಮಾಧ್ಯಮ ಸಹಿತ ಯಾರೂ ಬರದಂತೆ ನೋಡಿಕೊಳ್ಳಿ- ಸುಜಾತಾ ಭಟ್‌ ಮನವಿ; ಬನಶಂಕರಿ ಪೊಲೀಸರಿಂದ ಭದ್ರತೆ

ಮನೆಯ ಬಳಿ ಸಾರ್ವಜನಿಕರು, ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದರು.

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಅನನ್ಯಾ ಭಟ್‌ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದಾಳೆ ಎಂದು ಗೊಂದಲದ ಹೇಳಿಕೆ ನೀಡಿ ಸುದ್ದಿಯಾಗಿರುವ ಸುಜಾತಾ ಭಟ್‌ ಈಗ ತನಗೆ ರಕ್ಷಣೆ ನೀಡುವಂತೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಅವರ ಬೆಂಗಳೂರಿನ ಮನೆಗೆ ಬನಶಂಕರಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಬನಶಂಕರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸುಜಾತಾ ಭಟ್‌ 3 ವರ್ಷಗಳಿಂದ ವಾಸಿಸುತ್ತಿದ್ದಾರೆ. ಮನೆಯ ಬಳಿ ಸಾರ್ವಜನಿಕರು, ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿವಾಸದ ಸುತ್ತ ಭದ್ರತೆ ಒದಗಿಸಿದ್ದಾರೆ. ಇವರ ಮನೆಗೆ ಎಸ್‌ಐಟಿ ಅಧಿಕಾರಿಗಳು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮನೆಯ ಮುಂಭಾಗದಲ್ಲಿ 10ಕ್ಕೂ ಹೆಚ್ಚಿನ ಪೊಲೀಸರು ಬ್ಯಾರಿಕೇಡ್‌ ಹಾಕಲಾಗಿದೆ. ಸ್ಥಳದಲ್ಲಿ ಸಿಎಆರ್‌ ತುಕಡಿಯನ್ನೂ ನಿಯೋಜಿಸಲಾಗಿದೆ.

ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಸಂಬಂಧ ಸುಜಾತಾ ಭಟ್‌ ಮನೆಗೆ ಎಸ್‌ಐಟಿ ಅಧಿಕಾರಿಗಳು ಶೀಘ್ರದಲ್ಲೇ ಆಗಮಿಸಿ ಮಾಹಿತಿ ಪಡೆಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಬಿಎನ್‌ಎಸ್‌ ಕಾಯ್ದೆ ಪ್ರಕಾರ ದೂರುದಾರರು ಅಥವಾ ಸಾಕ್ಷಿದಾರರು 60 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಅಥವಾ 18 ವರ್ಷದ ಒಳಗಿನವರಾಗಿದ್ದರೆ ತನಿಖಾಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳಲು ಅವಕಾಶವಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಬಿಎನ್‌ಎಸ್‌ 131 ಸೆಕ್ಷನ್‌ನಡಿ ಸುಜಾತಾ ಭಟ್‌ಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅನಾರೋಗ್ಯದ ಕಾರಣ ನೀಡಿ ಸುಜಾತಾ ವಿಚಾರಣೆಗೆ ಗೈರಾಗಿದ್ದರು.

ಅನನ್ಯಾ ಭಟ್‌ ನನ್ನ ಮಗಳು ಅಲ್ಲ. ಈ ಬಗ್ಗೆ ಕಥೆ ಕಟ್ಟಿದ್ದೇನೆ ಎಂದು ಹೇಳಿದ್ದರು. ಅದಾದ ಮೇಲೆ, ಅನನ್ಯಾ ನನ್ನ ಮಗಳು. ಸಂದರ್ಶನದ ವೇಳೆ ಬೆದರಿಸಿ ನನ್ನ ಕಡೆಯಿಂದ ಹೇಳಿಕೆ ಕೊಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT