ಪ್ರಿಯಾಂಕ್ ಖರ್ಗೆ 
ರಾಜ್ಯ

ಪ್ರಬುದ್ಧ-ಸಮೃದ್ಧ ಭಾರತ ನಿರ್ಮಾಣವಾಗಬೇಕಾದರೆ RSS ಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು: ಪ್ರಿಯಾಂಕ್ ಖರ್ಗೆ

ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ.

ಬೆಂಗಳೂರು: ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ RSSಗೆ ತಾಕಿದ ಗಾಳಿಯೂ ನಮಗೆ ಸೋಕಬಾರದು“ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿವಾದ, ಮನುವಾದಗಳನ್ನೇ ನರ ನಾಡಿ, ರಕ್ತಗಳಲ್ಲಿ ಪ್ರವಾಹಿಸಿಕೊಂಡಿರುವ RSS ಎಂಬ ವಿಷಕಾರಿ ಸಂಘಟನೆಯನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ. ಏಕೆಂದರೆ, ಆರ್ಎಸ್ಎಸ್ ಸಂವಿಧಾನಕ್ಕೆ ಶತ್ರು, ಆರ್ಎಸ್ಎಸ್ ಐಕ್ಯತೆಗೆ ಶತ್ರು, ಆರ್ಎಸ್ಎಸ್ ರಾಷ್ಟ್ರಧ್ವಜಕ್ಕೆ ಶತ್ರು, ಆರ್ಎಸ್ಎಸ್ ರಾಷ್ಟ್ರಗೀತೆಗೆ ಶತ್ರು, ಆರ್ಎಸ್ಎಸ್ ಏಕತೆಗೆ, ಸಾರ್ವಭೌಮತೆಗೆ ಶತ್ರು ಎಂದು ಹೇಳಿದ್ದಾರೆ.

ಬಾಬಾ ಸಾಹೇಬರು, ಸರ್ದಾರ್ ಪಟೇಲರು ದಶಕಗಳ ಹಿಂದೆಯೇ ಆರ್ಎಸ್ಎಸ್ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ, ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ. ಬ್ರಿಟಿಷರೊಂದಿಗೆ ಕೈಜೋಡಿಸಿ ಭಾರತ ವಿರೋಧಿಯಾಗಿ ನಡೆದುಕೊಂಡಿದ್ದ ಆರ್ಎಸ್ಎಸ್ ಸ್ವತಂತ್ರಾನಂತರ ಐಕ್ಯತೆಯ ವಿರೋಧಿ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಿತು. ಸಂಘ ಪರಿವಾರದ ಅಪಾಯವನ್ನು ಅಂದೇ ಊಹಿಸಿದ ಸರ್ದಾರ್ ಪಟೇಲರು ನಿಷೇಧ ಹೇರಿದ್ದರು.

ನಮ್ಮ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳನ್ನು ಬೇರುಸಹಿತ ನಿರ್ಮೂಲನೆ ಮಾಡಬೇಕಿದೆ, ಮತ್ತು ರಾಷ್ಟ್ರದ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸಲು ಮತ್ತು ದೇಶದ ಹೆಸರನ್ನು ಕಳೆಗುಂದಿಸಲು ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್ ಅನ್ನು ನಿಷೇಧಿಸುತ್ತಿದ್ದೇವೆ.

ಇದು ಸರ್ದಾರ್ ಪಟೇಲರು ಫೆಬ್ರವರಿ 4, 1948 ರಂದು ಬಿಡುಗಡೆ ಮಾಡಿದ ಪ್ರಕಟಣೆ. ಪಟೇಲರ ಈ ಮಾತುಗಳನ್ನು ನಾವು ಸದಾ ಗಮನದಲ್ಲಿ ಇರಿಸಿಕೊಳ್ಳಬೇಕಿದೆ. ಸಂವಿಧಾನಕ್ಕೆ, ರಾಷ್ಟ್ರಧ್ವಜಕ್ಕೆ ನಿಷ್ಠರಾಗಿರುತ್ತೇವೆ ಎಂದು ಹೇಳಿ, ನಾಟಕವಾಡಿ ನಿಷೇಧವನ್ನು ತೆರವು ಮಾಡಿಸಿಕೊಂಡ ಆರ್ಎಸ್ಎಸ್ ನಂತರ ಮುಂದುವರೆಸಿದ್ದು ಅದೇ ಸಂವಿಧಾನ ವಿರೋಧಿ ಕೃತ್ಯಗಳನ್ನೇ.

ಈ ನೂರು ವರ್ಷಗಳಲ್ಲಿ ಆರ್ಎಸ್ಎಸ್ ಈ ದೇಶಕ್ಕೆ ನೀಡಿದ ಕೇವಲ 10 ಕೊಡುಗೆಗಳನ್ನು ಹೇಳಲು ಬಿಜೆಪಿಗರಿಂದ ಮತ್ತು ಸಂಘಪರಿವಾರದವರಿಂದ ಸಾಧ್ಯವಾಗುವುದಿಲ್ಲ, ಇಂತಹ ಆರ್ಎಸ್ಎಸ್ ನಿಂದ ಅಪಾಯವಿದೆಯೇ ಹೊರತು ಸಹಾಯವಿಲ್ಲ. ಸಂವಿಧಾನವನ್ನು ಒಪ್ಪದೆ ಕರಡು ಪ್ರತಿಯನ್ನು ಸುಟ್ಟು ಹಾಕಿದ್ದ, ರಾಷ್ಟ್ರಧ್ವಜವನ್ನು ಗೌರವಿಸದ, ಮಹಿಳೆಯರು, ಶೋಷಿತರನ್ನು ಮೂರನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುವ ಅಜೆಂಡಾ ಹೊಂದಿರುವ ಆರ್ಎಸ್ಎಸ್ ಕಾಂಗ್ರೆಸ್ಸಿಗೆ ಮಾತ್ರವಲ್ಲ ಈ ದೇಶದ ಐಕ್ಯತೆಗೆ ಪರಮ ಶತ್ರು ಎನ್ನುವುದನ್ನು ಪ್ರತಿ ದೇಶಭಕ್ತನೂ ಗಮನದಲ್ಲಿರಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT