ಬಿಎಂಟಿಸಿ ಬಸ್ 
ರಾಜ್ಯ

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC

ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ.

ಬೆಂಗಳೂರು: ಎಸ್‌ಜೆಪಿ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ 11 ವರ್ಷದ ಬಾಲಕನ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಬಿಎಂಟಿಸಿ ಸ್ಪಷ್ಟನೆ ನೀಡಿದೆ.

ಅಪಘಾತದಲ್ಲಿ ಬಸ್ ಚಾಲಕನ ಯಾವುದೇ ತಪ್ಪಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಸ್ಪಷ್ಟಪಡಿಸಿದೆ.

ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ ಎಂದು ಸಿಸಿಟಿವಿ ಪರಿಶೀಲನೆಯಿಂದ ತಿಳಿದುಬಂದಿದೆ. ದ್ವಿಚಕ್ರ ವಾಹನದ ಸವಾರ ಹಠಾತ್ತನೆ ಬ್ರೇಕ್ ಹಾಕಿದ್ದು, ಸ್ಕಿಡ್ ಆಗಿ ಎಲ್ಲರೂ ಕೆಳಗೆ ಬಿದ್ದಿದ್ದಾರೆ. ಬಾಲಕ ಬಸ್ಸಿನ ಹಿಂದಿನ ಚಕ್ರಕ್ಕೆ ಸಿಲುಕಿದ್ದಾನೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಬಾಲಕ ಸಾವನ್ನಪ್ಪಿದ್ದಾನೆಂದು ಹೇಳಿದೆ.

ಹೆಚ್ಚಿನ ತನಿಖೆಗಾಗಿ ಘಟನೆಗೆ ಸಂಬಂಧಿಸಿದ ವಾಹನವನ್ನು ಪ್ರಸ್ತುತ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ