ವಿಧಾನಸೌಧ 
ರಾಜ್ಯ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನಗಳ ನೇಮಕಾತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ.

ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು. ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ; ಹಿರಿಯ ಪತ್ರಕರ್ತ ಮತ್ತು 'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್' ನ ಮೈಸೂರು ಬ್ಯೂರೋ ಮುಖ್ಯಸ್ಥ ಕೆ ಶಿವಕುಮಾರ್ ಮತ್ತು ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮುಖಂಡ, ಅಂಬೇಡ್ಕರ್ ಫೌಂಡೇಶನ್‌ನ ಉಪಾಧ್ಯಕ್ಷ ಎಫ್‌ಎಚ್ ಜಕಪ್ಪನವರ್ ಅವರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ನಾಮನಿರ್ದೇಶನ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, 'ಅಧಿಕೃತ ಪಟ್ಟಿಗಾಗಿ ಕಾಯುತ್ತಿದ್ದೇನೆ" ಎಂದು ಹೇಳಿದ್ದಾರೆ.

ಈಗಾಗಲೇ ಪಟ್ಟಿಯನ್ನು ರಾಜ್ಯಪಾಲರ ಕಚೇರಿಗೆ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ದೃಢಪಡಿಸಿವೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪಟ್ಟಿಗೆ ಅನುಮೋದನೆ ನೀಡಿದ ಬಳಿಕ ನಾಲ್ವರೂ ಎಂಎಲ್‌ಸಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.

ಇದರೊಂದಿಗೆ, 75 ಸದಸ್ಯರ ಮೇಲ್ಮನೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಪಡೆಯುತ್ತದೆ. ಡಿಸೆಂಬರ್ ವೇಳೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳೆರಡನ್ನೂ ಪಡೆಯಲು ಅವರು ಅರ್ಜಿ ಸಲ್ಲಿಸಬಹುದು.

ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಸದಸ್ಯರ ಪೈಕಿ ಯುಬಿ.ವೆಂಕಟೇಶ್, ಪ್ರಕಾಶ್ ರಾಥೋಡ್, ಸಿಪಿ.ಯೋಗೇಶ್ವರ್ (ರಾಜೀನಾಮೆ) ಹಾಗೂ ತಿಪ್ಪೇಸ್ವಾಮಿ ಅವರು ಅವಧಿ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಖಾಲಿಯಾದ ನಾಲ್ಕು ಸ್ಥಾನಗಳಿಗೆ ಇದೀಗ ನಾಮನಿರ್ದೇಶನ ಮಾಡಲಾಗುತ್ತಿದೆ.

ನಾಮನಿರ್ದೇಶನಗೊಳ್ಳುವ ನಾಲ್ವರ ಪೈಕಿ ಮೂವರು ಪೂರ್ಣ ಅವಧಿಯನ್ನು ಹೊಂದಿದ್ದರೆ, ಒಬ್ಬರು ಉಳಿದಿರುವ 11 ತಿಂಗಳುಗಳವರೆಗೆ ಮಾತ್ರ ಸೇವೆ ಸಲ್ಲಿಸುತ್ತಾರೆಂದು ತಿಳಿದುಬಂದಿದೆ.

ಜೂನ್ 2026 ರಲ್ಲಿ ಏಳು ಎಂಎಲ್‌ಸಿ ಸ್ಥಾನಗಳು ಖಾಲಿಯಾದಾಗ.ಅಲ್ಪಾವಧಿಯ ಹೊಂದಿರುವ ರಮೇಶ್ ಬಾಬು ಅವರನ್ನು ಮುಂದಿನ ಪೂರ್ಣ ಆರು ವರ್ಷಗಳ ಅವಧಿಗೆ ಮರು ನಾಮನಿರ್ದೇಶನ ಮಾಡಬಹುದು ಎಂದು ಮೂಲಗಳು ತಿಳಿಸಿವೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT