ದೂರುದಾರ ಚಿನ್ನಯ್ಯ 
ರಾಜ್ಯ

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

ಧರ್ಮಸ್ಥಳ ಸಮೀಪದ ಪಾಂಗಾಳದ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಹಲ್ಲೆ ಮತ್ತು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಒಂದು ದಶಕ ಕಳೆದರೂ ನಿಜವಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಆಕೆಯ ಕುಟುಂಬದವರು ಹೇಳುತ್ತಾ ಬಂದಿದ್ದಾರೆ.

ಮಂಗಳೂರು: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ 17 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಸಂತ್ರಸ್ತೆಯ ತಾಯಿ ಕುಸುಮಾವತಿ ಹೊಸದಾಗಿ ದೂರು ದಾಖಲಿಸಿದ್ದಾರೆ.

ಹಲವು ಶವಗಳನ್ನು ಹೂತಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದ ಅಪರಿಚಿತ ಸಾಕ್ಷಿ-ದೂರುದಾರನ ಮಂಪರು ಪರೀಕ್ಷೆ ನಡೆಸುವಂತೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಪ್ರಣಬ್ ಮೊಹಂತಿ ಅವರನ್ನು ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಸಮೀಪದ ಪಾಂಗಾಳದ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಹಲ್ಲೆ ಮತ್ತು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಒಂದು ದಶಕ ಕಳೆದರೂ ನಿಜವಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಆಕೆಯ ಕುಟುಂಬದವರು ಹೇಳುತ್ತಾ ಬಂದಿದ್ದಾರೆ.

ಪ್ರಸ್ತುತ ಎಸ್‌ಐಟಿ ವಶದಲ್ಲಿರುವ ದೂರುದಾರ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಕುಸುಮಾವತಿ ಅವರು ಎಸ್‌ಐಟಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಉಜಿರೆಯಲ್ಲಿ ನಡೆದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ವಿಚಾರಣೆಯ ಸಂದರ್ಭದಲ್ಲಿ ದೂರುದಾರರ ಸಹೋದರಿ ನೀಡಿದ ಹೇಳಿಕೆಗಳನ್ನು ಅವರು ಉಲ್ಲೇಖಿಸಿದ್ದಾರೆ.

ಸೌಜನ್ಯ ಅವರ ಹಲ್ಲೆ ಮತ್ತು ಕೊಲೆಯ ಬಗ್ಗೆ ತಿಳಿದಿದ್ದಕ್ಕಾಗಿ ದೂರುದಾರರು 2014 ರಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಮುಖ ವ್ಯಕ್ತಿಯಿಂದ ಜೀವ ಬೆದರಿಕೆ ಎದುರಿಸಿದ ನಂತರ ಧರ್ಮಸ್ಥಳದಿಂದ ಪರಾರಿಯಾಗಿದ್ದರು ಎಂದು ರತ್ನಾ ಹೇಳಿಕೆ ನೀಡಿದ್ದಾರೆ. ಈ ವ್ಯಕ್ತಿ ಅಪರಾಧದಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಪಡಿಸಿದರೆ, ಆತ ಎಲ್ಲಿಗೆ ಹೋದರೂ ಹುಡುಕಿ ಕೊಲ್ಲಲಾಗುವುದು ಎಂದು ಎಚ್ಚರಿಸಿದ್ದರು ಎಂದು ರತ್ನ ಹೇಳಿರುವುದಾಗಿ ಕುಸುಮಾವತಿ ತಿಳಿಸಿದ್ದಾರೆ.

ಇದಲ್ಲದೆ ಆಗಸ್ಟ್ 24 ರಂದು ಪ್ರಸಾರವಾದ ಇತ್ತೀಚಿನ ಟಿವಿ ಸಂದರ್ಶನವೊಂದರಲ್ಲಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆಗೆ ಕಾರಣರಾದವರ ಹೆಸರನ್ನು ರವಿ ಪೂಜಾರಿ ಎಂಬುವರು ತಿಳಿಸಿದ್ದ. ಆದರೆ ತದನಂತರ ಆತನಿಗೆ ದೇವಾಲಯಕ್ಕೆ ಸಂಬಧಿಸಿದ ವ್ಯಕ್ತಿಗಳು ಹಣ ನೀಡಿ ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ಅನೇಕ ಶವಗಳನ್ನು ಹೂತು ಹಾಕಲಾಗಿದ್ದ ಸ್ಥಳದಲ್ಲಿಯೇ ಸೌಜನ್ಯಳ ಶವ ಪತ್ತೆಯಾಗಿತ್ತು. ಅಪರಾಧ ಮುಚ್ಚಿಹಾಕುವ ಭಾಗವಾಗಿ ಆಕೆಯ ದೇಹವನ್ನು ಹೂತು ಹಾಕಲು ಪ್ರಯತ್ನ ನಡೆದಿರಬಹುದು ಎಂಬ ಗಂಭೀರ ಅನುಮಾನವನ್ನು ಇದು ಹುಟ್ಟುಹಾಕುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ದೂರುದಾರರಿಗೆ ಮಂಪರು ಪರೀಕ್ಷೆ ಮಾಡುವುದರಿಂದ ಘಟನೆಯ ಹಿಂದಿನ ಸಂಪೂರ್ಣ ಸತ್ಯ ಮತ್ತು ಅದರ ಹಿಂದೆ ಇರುವವರನ್ನು ಬಹಿರಂಪಡಿಸಬಹುದು ಎಂದು ಕುಟುಂಬವು ಒತ್ತಾಯಿಸುತ್ತದೆ. ಕರ್ನಾಟಕ ಸರ್ಕಾರ ಮತ್ತು ಎಸ್‌ಐಟಿ ನ್ಯಾಯವನ್ನು ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿರುವುದಾಗಿ ಕುಸುಮಾವತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT