ಸಂಗ್ರಹ ಚಿತ್ರ 
ರಾಜ್ಯ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಬಿಟ್ಟು ಹೋದ ಜಾತಿ-ಉಪ ಜಾತಿ ಸೇರ್ಪಡೆಗಾಗಿ ಅವಧಿ ಸೆಪ್ಟೆಂಬರ್ 1ರವರೆಗೆ ವಿಸ್ತರಣೆ

ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳೂ ಸೇರಿದಂತೆ ಎಲ್ಲಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರಕಾರದ ಆದೇಶಾನುಸಾರ ಕೈಗೊಳ್ಳಲು ಆಯೋಗ ಮುಂದಾಗಿದೆ.

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲು ಸಮೀಕ್ಷೆಯ ಅವಧಿಯನ್ನು ಸೆಪ್ಟೆಂಬರ್ 1ರವರೆಗೂ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳೂ ಸೇರಿದಂತೆ ಎಲ್ಲಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರಕಾರದ ಆದೇಶಾನುಸಾರ ಕೈಗೊಳ್ಳಲು ಆಯೋಗ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆ.22ರಂದು ಜಾತಿ, ಉಪಜಾತಿಗಳ ಪಟ್ಟಿ ಮಾಡಿ, ಅದರಲ್ಲಿಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ 7 ದಿನಗಳ ಒಳಗೆ ಅವುಗಳ ಮಾಹಿತಿ, ಸಲಹೆ ನೀಡಲು ಗಡುವು ನೀಡಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಕೋರಿಕೆ ಮೇರೆಗೆ ಸೆ.1ರಂದು ಸಂಜೆ 5 ಗಂಟೆವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್‌ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ಮನವಿಗಳನ್ನು ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್‌ ಟ್ಯಾಂಕ್‌ ಬಂಡ್‌ ಪ್ರದೇಶ, ವಸಂತನಗರ, ಬೆಂಗಳೂರು ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್