ನಟ ವಿಷ್ಣುವರ್ಧನ್ ಸಮಾಧಿ ನೆಲಸಮ ವಿವಾದ 
ರಾಜ್ಯ

Dr. Vishnuvardhan Memorial: ವಿಷ್ಣು ಸಮಾಧಿ ಕೆಡವಿದ ಬಾಲಕೃಷ್ಣ ಕುಟುಂಬಕ್ಕೆ ಸರ್ಕಾರ ಶಾಕ್!, Abhiman Studio ಭೂಮಿ 'ಅರಣ್ಯ' ಎಂದು ಘೋಷಣೆ?

ವಿಷ್ಣುವರ್ಧನ್ ಅವರ ಸಮಾಧಿಯನ್ನು ಕೆಡವಿದ ಬಳಿಕ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಈ ಪತ್ರ ಬರೆದಿದ್ದಾರೆ. ಈ ಪತ್ರ ವೈರಲ್ ಆಗಿದ್ದು, ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ.

ಬೆಂಗಳೂರು: ದಿವಂಗತ ನಟ ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಸ್ಮಾರಕವನ್ನು ತೆರವು ಮಾಡುವ ಮೂಲಕ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ನಟ ಬಾಲಕೃಷ್ಣ ಕುಟುಂಬಕ್ಕೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಭಿಮಾನ್ ಸ್ಟುಡಿಯೋಗಾಗಿ (Abhiman Studio) ನೀಡಿದ್ದ ಜಾಗವನ್ನು ಅರಣ್ಯ ಭೂಮಿ ಎಂದು ಘೋಷಣೆ ಮಾಡಿದೆ.

ಅಭಿಮಾನ್ ಸ್ಟುಡಿಯೋದಲ್ಲಿರುವ (Abhiman Studio) ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ಭುಗಿಲೆದ್ದಿದ್ದ ವಿವಾದ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು, ಅರಣ್ಯಾಧಿಕಾರಿಯೊಬ್ಬರು ಅಭಿಮಾನ ಸ್ಟುಡಿಯೋದಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಡಿಸಿಗೆ ಪತ್ರ ಬರೆದಿದ್ದಾರೆ.

ವಿಷ್ಣುವರ್ಧನ್ ಅವರ ಸಮಾಧಿಯನ್ನು ಕೆಡವಿದ ಬಳಿಕ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಈ ಪತ್ರ ಬರೆದಿದ್ದಾರೆ. ಈ ಪತ್ರ ವೈರಲ್ ಆಗಿದ್ದು, ಈ ಪತ್ರದಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಬರೆಯಲಾಗಿದೆ.

ಪತ್ರದಲ್ಲೇನಿದೆ?

ಆಗಸ್ಟ್ 22ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಅವರು ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅವರು ನಿಯಮ ಉಲ್ಲಂಘನೆ ಬಗ್ಗೆ ಉಲ್ಲೇಖಿಸಿದ್ದಾರೆ. ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ 20 ಎಕರೆ ಭೂಮಿಯನ್ನು 20 ವರ್ಷ ಲೀಸ್​​ಗೆ ನೀಡಾಗಿತ್ತು. ನಂತರ ಲೀಸ್ ಅವಧಿ ವಿಸ್ತರಣೆ ಮಾಡಿಕೊಳ್ಳಲಾಯಿತು. ಒಂದು ವೇಳೆ ಷರತ್ತು ಉಲ್ಲಂಘನೆಯಾದಲ್ಲಿ, ಯಾವುದೇ ಪರಿಹಾರ ನೀಡದೆ ಮಂಜೂರಾತಿಯನ್ನು ರದ್ದುಪಡಿಸಿ ಭೂಮಿಯನ್ನು ಸರ್ಕಾರಕ್ಕೆ ಹಿಂಪಡೆಯಲಾಗುವುದು ಎಂದು ಸ್ಪಷ್ಟವಾಗಿ ನಮೂದಿಸಲಾಗಿತ್ತು.

2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಮಕ್ಕಳಾದ ಶ್ರೀನಿವಾಸ್ ಹಾಗೂ ಗಣೇಶ್ ಜಿಲ್ಲಾಧಿಕಾರಿಗಳ ಬಳಿ 10 ಎಕರೆ ಮಾರಲು ಒಪ್ಪಿಗೆ ಕೇಳಿದ್ದರು ಮತ್ತು ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಲಾಯಿತು ಎನ್ನಲಾಗಿದೆ. ಮಾರಾಟದಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳೋದಾಗಿ ಅವರು ಸರ್ಕಾರಕ್ಕೆ ಹೇಳಿದ್ದರು. ಆದರೆ, ಈವರೆಗೆ ಸ್ಟುಡಿಯೋ ಯಥಾ ಸ್ಥಿತಿಯಲ್ಲೇ ಇದೆ. ಈವರೆಗೆ ಇದರ ಅಭಿವೃದ್ಧಿ ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಿಯಮ ಉಲ್ಲಂಘನೆ!

ಬೆಂಗಳೂರು ದಕ್ಷಿಣ ತಾಲೂಕಿನ, ಕೆಂಗೇರಿ ಹೋಬಳಿಯ ಮೈಲಸಂದ್ರ ಗ್ರಾಮದ ಸರ್ವೆ ನಂ. 26ರಲ್ಲಿರುವ ಈ ಭೂಮಿಯನ್ನು ನೀಡುವಾಗ ವಿಧಿಸಲಾಗಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈಗ ಬಾಲಕೃಷ್ಣ ಮೊಮ್ಮಗ ಕಾರ್ತಿಕ್ ಅವರು ಈ ಜಮೀನನ್ನು ಮಾರಲು ಪ್ಲ್ಯಾನ್ ಮಾಡಿದ್ದರು. 1 ಎಕರೆಗೆ 14 ಕೋಟಿ ರೂಪಾಯಿಯಂತೆ ಮಾರಲು ಪ್ಲ್ಯಾನ್ ನಡೆದಿತ್ತು. ಈ ವಿಚಾರ ಅರಣ್ಯಾಧಿಕಾರಿಗೆ ಗೊತ್ತಾಗಿದೆ. ಹೀಗಾಗಿ, ಇದನ್ನು ವಶಕ್ಕೆ ಪಡೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.

ಅರಣ್ಯ ಇಲಾಖೆಯು ತನ್ನ ಪತ್ರದಲ್ಲಿ ಉಲ್ಲಂಘನೆಗಳ ಸರಣಿಯನ್ನೇ ಪಟ್ಟಿ ಮಾಡಿದೆ. ಪ್ರಮುಖವಾಗಿ ಟಿ.ಎನ್.ಬಾಲಕೃಷ್ಣ ಅವರ ಮಕ್ಕಳು ಮಂಜೂರಾದ 20 ಎಕರೆಗಳ ಪೈಕಿ 10 ಎಕರೆ ಜಮೀನನ್ನು ಮಾರಾಟ ಮಾಡಿದ್ದರು. ಇದು 1970ರ ಮೂಲ ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.

ಅರಣ್ಯಾಧಿಕಾರಿಗಳ ಪತ್ರ

ಮಂಜೂರಾತಿ ಆದೇಶ ರದ್ದುಪಡಿಸಬೇಕು ಎಂದು ಮನವಿ

ಈ ಪ್ರದೇಶವು ಕಾನೂನಾತ್ಮಕವಾಗಿ ಇಂದಿಗೂ ಅರಣ್ಯ ಸ್ಥಾನಮಾನವನ್ನೇ ಹೊಂದಿದೆ. ಮೇಲಿನ ಎಲ್ಲಾ ಕಾರಣಗಳಿಂದ ಹಾಗೂ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹಿನ್ನೆಲೆಯಲ್ಲಿ,ಟಿ.ಎನ್.ಬಾಲಕೃಷ್ಣ ಅವರಿಗೆ ನೀಡಲಾಗಿದ್ದ ಭೂಮಿ ಮಂಜೂರಾತಿ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕು. ಅಲ್ಲದೆ, ಭೂಮಿಯನ್ನು ಅರಣ್ಯ ಇಲಾಖೆಯ ಹೆಸರಿಗೆ ಇಂಡೀಕರಣ (ಖಾತೆ ಬದಲಾವಣೆ) ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಸಂಪೂರ್ಣ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್. ರವೀಂದ್ರ ಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ಅರಣ್ಯ ಪ್ರದೇಶ

ಮೈಲಸಂದ್ರ ಗ್ರಾಮದ ಪ್ರದೇಶವನ್ನು "ತುರಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶ" ಎಂದು 1935ರಲ್ಲೇ ಸರ್ಕಾರ ಘೋಷಿಸಿತ್ತು. ನಂತರ, 1969ರ ಏಪ್ರಿಲ್ 9ರ ಸರ್ಕಾರಿ ಆದೇಶದ ಅನ್ವಯ, ಸರ್ವೆ ನಂ. 26ರಲ್ಲಿನ 20 ಎಕರೆ ಪ್ರದೇಶವನ್ನು ಅಭಿಮಾನ್ ಸ್ಟುಡಿಯೋ ಸ್ಥಾಪಿಸಲು ಟಿ.ಎನ್.ಬಾಲಕೃಷ್ಣ ಅವರಿಗೆ 20 ವರ್ಷಗಳ ಗೇಣಿ ಆಧಾರದ ಮೇಲೆ ನೀಡಲಾಗಿತ್ತು.

ಸರ್ಕಾರಕ್ಕೆ ವಿಷ್ಣು ಕುಟುಂಬ ಮನವಿ

ಸದ್ಯ ವಿಷ್ಣುವರ್ಧನ್ ಅಭಿಮಾನಿಗಳು ಮತ್ತು ಅವರ ಕುಟುಂಬಸ್ಥರು ಸ್ಟುಡಿಯೋದ 10 ಗುಂಟೆ ಜಾಗ ಅಂದರೆ ವಿಷ್ಣು ಅಂತಿಮ ವಿಧಿವಿಧಾನ ನಡೆದ ಜಾಗವನ್ನು ತಮಗೆ ನೀಡುವಂತೆ ಕೋರುತ್ತಿದ್ದಾರೆ. ವಿಷ್ಣುವರ್ಧನ್ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಪ್ಲ್ಯಾನ್​ನಲ್ಲಿ ಅಭಿಮಾನಿಗಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷಗಳ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು, Video!

ಧರ್ಮಸ್ಥಳದ ವಿರುದ್ಧ ಬಿಜೆಪಿಯಿಂದಲೇ ಷಡ್ಯಂತ್ರ: ಡಿಕೆ ಶಿವಕುಮಾರ್

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

SCROLL FOR NEXT