ಸಾಂದರ್ಭಿಕ ಚಿತ್ರ 
ರಾಜ್ಯ

40 ಇಲಾಖೆಗಳಿಗೆ ಹೊಸ ನೇಮಕಾತಿ-ವೇತನ ಪಾವತಿ: ಎಲ್ಲಿಂದ ಬರುತ್ತೆ ಹಣ? ಸರ್ಕಾರದ ಚಿತ್ತ SCSP/TSP ನಿಧಿಯತ್ತ!

ಸರ್ಕಾರಕ್ಕೆ ವಿವಿಧ ಇಲಾಖೆಗಳ ಅಡಿಯಲ್ಲಿ SC/ST ಗಳಿಗೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕಾಗುತ್ತದೆ, ಇಲ್ಲವೇ ಪಾವತಿ ವಿಳಂಬ ಮಾಡಬೇಕಾಗುತ್ತದೆ. ಏಕೆಂದರೆ ಇದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಆಂತರಿಕ ಕೋಟಾ ಜಾರಿಗೆ ತರುವ ಭಾಗವಾಗಿ 40 ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.76 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಆದರೆ ಅದಕ್ಕೆ ಪಾವತಿಸಲು ಹಣ ಎಲ್ಲಿಂದ ಬರುತ್ತದೆ? ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ವೇತನಕ್ಕೆ ಹೋಲಿಸಿದರೆ 8,000 ರಿಂದ 10,000 ಕೋಟಿ ರೂ.ಗಳಿಗಿಂತ ಹೆಚ್ಚಿನ ವೆಚ್ಚವನ್ನು ಪೂರೈಸಲು ಸರ್ಕಾರವು ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅನುದಾನಗಳ ಮೇಲೆ ಕಣ್ಣಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇದರಿಂದ ರಾಜ್ಯದ ಬದ್ಧತಾ ವೆಚ್ಚವೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರಕ್ಕೆ ವಿವಿಧ ಇಲಾಖೆಗಳ ಅಡಿಯಲ್ಲಿ SC/ST ಗಳಿಗೆ ಸಬ್ಸಿಡಿಗಳನ್ನು ಕಡಿತಗೊಳಿಸಬೇಕಾಗುತ್ತದೆ, ಇಲ್ಲವೇ ಪಾವತಿ ವಿಳಂಬ ಮಾಡಬೇಕಾಗುತ್ತದೆ. ಏಕೆಂದರೆ ಇದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಲಾಗುತ್ತಿದೆ.

ಉದಾಹರಣೆಗೆ, ಕೈಗಾರಿಕಾ ಇಲಾಖೆ ಮಾತ್ರ SCSP/TSP ಅಡಿಯಲ್ಲಿ ಸುಮಾರು 800 ಕೋಟಿ ರೂ. ಸಬ್ಸಿಡಿ ವಿತರಿಸಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ. ಇದನ್ನೇ ಬೇರೆಡೆಗೆ ತಿರುಗಿಸಿ ನೌಕರರ ಸಂಬಳಕ್ಕಾಗಿ ಬಳಸಲಾಗುತ್ತದೆ ಎಂದು ದಲಿತ ಸಮುದಾಯದ ಕಾಂಗ್ರೆಸ್ ನಾಯಕರೊಬ್ಬರು ಆರೋಪಿಸಿದ್ದಾರೆ. ಸರ್ಕಾರವು 2025-26ರ ಬಜೆಟ್‌ನಲ್ಲಿ ಐದು ಖಾತರಿಗಳಿಗಾಗಿ ವಾರ್ಷಿಕವಾಗಿ 51,034 ಕೋಟಿ ರೂ.ಗಳನ್ನು ಮತ್ತು SCSP/TSP ಅನುದಾನಗಳಿಗಾಗಿ 42,018 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಮೂಲಗಳ ಪ್ರಕಾರ, ಆದಾಯ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಆದ್ಯತೆಯ ಆಧಾರದ ಮೇಲೆ ಸುಮಾರು 25,000 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಸರ್ಕಾರವು ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ.

ಗೃಹ ಇಲಾಖೆ ಸೇರಿದಂತೆ ಸುಮಾರು 40,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಆಶಿಸಿದ್ದಾರೆ. ಆಂತರಿಕ ಕೋಟಾ ಅನುಷ್ಠಾನಕ್ಕೆ ಆದೇಶ ಹೊರಡಿಸಿದ್ದರೂ ಸಹ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DAPR) ಇನ್ನೂ ನೇಮಕಾತಿ ಮೇಲಿನ ನಿಷೇಧವನ್ನು ತೆಗೆದುಹಾಕಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!