ಸಾಂದರ್ಬಿಕ ಚಿತ್ರ 
ರಾಜ್ಯ

ಮದ್ಯ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಆಗಸ್ಟ್ 31, ಸೆಪ್ಟಂಬರ್ 14 ರಂದು ಮದ್ಯ ಮಾರಾಟ ನಿಷೇಧ

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 31 ಹಾಗೂ ಸೆಪ್ಟಂಬರ್ 14ರಂದು ನಗರದ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಗಸ್ಟ್ 31ರ ಬೆಳಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 1ರ ಬೆಳಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್‌ ಸ್ಟ್ರೀಟ್‌, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್‌, ಜೆ.ಸಿ. ನಗರ, ಆರ್‌.ಟಿ. ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇನ್ನು ಸೆಪ್ಟೆಂಬರ್ 14ರ ಬೆಳಗ್ಗೆ 6ಗಂಟೆಯಿಂದ ಸೆ.15ರ ಬೆಳಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಂಧನ ನ್ಯಾಯಸಮ್ಮತ: ಭಾರತಕ್ಕೆ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಆದೇಶ!

ವಿಜಯಪುರ ಬಳಿಕ ಇದೀಗ ಬಾಗಲಕೋಟೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಶ್ರೀಗಳಿಗೆ ನಿರ್ಬಂಧ!

ಲಕ್ಷ ಕೋಟಿ ಹೂಡಿಕೆಯ Google AI ಹಬ್ ಆಂಧ್ರಕ್ಕೆ ಹೊಯ್ತು: ನಮ್ಮ ಸಚಿವರು ಜಾತಿ, ಜಾತಿ ಗಣತಿಯಲ್ಲಿ ಮಗ್ನ; ಉದ್ಯಮಿ ಪೈ ವ್ಯಂಗ್ಯ

Pak-Afghan ಕದನ ವಿರಾಮ ಅಂತ್ಯ ಬೆನ್ನಲ್ಲೇ ಸೇನಾ ನೆಲೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಪಾಕ್ ಸೈನಿಕರು ಬಲಿ!

ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಶಕ್ತಿ ಯೋಜನೆ; 'ನಕಲಿ' ಪ್ರಮಾಣಪತ್ರ ಹಂಚಿಕೊಂಡ್ರಾ CM?

SCROLL FOR NEXT