ನಿಖಿಲ್ ಕುಮಾರಸ್ವಾಮಿ 
ರಾಜ್ಯ

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್: ಅಪ ಪ್ರಚಾರ ಖಂಡಿಸಿ ನಾಳೆ ಜೆಡಿಎಸ್ 'ಸತ್ಯಯಾತ್ರೆ'ಗೆ ಚಾಲನೆ

ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ.

ಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ ಎಂದು JDS ಯುವ ಘಟದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದರು.

ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ನಾಳೆ ಧರ್ಮಸ್ಥಳ ಸತ್ಯ ಯಾತ್ರೆ: ಧರ್ಮಸ್ಥಳದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದು, ನೈತಿಕ ಬೆಂಬಲ ವ್ಯಕ್ತಪಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೂಚನೆಯೆಂತೆ ಆ.31ರಂದು ಜೆಡಿಎಸ್‌ ವತಿಯಿಂದ ʼಧರ್ಮಸ್ಥಳ ಸತ್ಯಯಾತ್ರೆʼಯನ್ನು ಹಮ್ಮಿಕೊಂಡಿದ್ದೇವೆ. ಯಾವುದೇ ರಾಜಕೀಯ ಬೆರೆಸದೆ ಧರ್ಮಸ್ಥಳ ಸತ್ಯ ಯಾತ್ರೆ ನಡೆಸುತ್ತಿದ್ದೇವೆ. ಧರ್ಮ ರಕ್ಷಣೆಯ ಉದ್ದೇಶದಿಂದ ಈ ಯಾತ್ರೆ ಆಯೋಜನೆ ಮಾಡಿದ್ದೇವೆ. ಧರ್ಮಸ್ಥಳ ಪುಣ್ಯ ಕ್ಷೇತ್ರದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ನಾಳೆ ಯಾತ್ರೆ ಕೈಗೊಂಡಿದ್ದೇವೆ ಎಂದು ತಿಳಿಸಿದರು.

800 ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು.? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬರೋ, ಇಬ್ಬರೋ ದೂರು ಕೊಟ್ಟ ತಕ್ಷಣ SIT ರಚನೆ ಮಾಡಿದ್ದಾರೆ. ಚಿನ್ನಯ್ಯ ಎಂಬ ವ್ಯಕ್ತಿ ಬುರುಡೆ ತಂದು ಧರ್ಮಸ್ಥಳದಲ್ಲಿ ಮಾಸ್ ಮರ್ಡರ್ ನಡೆದಿದೆ ಎಂದು ಬಿಂಬಿಸಿದ್ರು. ಮೊದಲು FSL ವರದಿ ಪಡೆದ ಬಳಿಕ ವಿಷಯ ಗಂಭೀರತೆ ಸರ್ಕಾರ ಅರಿಯಬೇಕಿತ್ತು. ಸಿದ್ದರಾಮಯ್ಯ ಹೆಸರಲ್ಲಿ SIT ಆಗಿದೆ. ಧರ್ಮಾಧಿಕಾರಿಗಳು ಮತ್ತು ಅವರ ಕುಟುಂಬಕ್ಕೆ ನೈತಿಕ ಬೆಂಬಲ ಸೂಚಿಸಬೇಕಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!

ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್‌; ನ್ಯೂಯಾರ್ಕ್ ಟೈಮ್ಸ್ ವರದಿ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ರಾಜ್ಯದ ಜನತೆಗ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿ

SCROLL FOR NEXT