ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ: 15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ; ಪೋಕ್ಸೊ ಪ್ರಕರಣ ದಾಖಲು

ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಚಿಕ್ಕೋಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.

ಅಧ್ಯಕ್ಷ ಬಂಧನದ ಭೀತಿಯಿಂದ ‌ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಕೃತ್ಯ‌ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾಪಂ ‌ಅಧ್ಯಕ್ಷನ‌ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

ಎರಡು ವೋಟರ್ ಐಡಿ: ಕಾಂಗ್ರೆಸ್ ನಾಯಕ ಪವನ್ ಖೇರಾ ಪತ್ನಿಗೆ ಚುನಾವಣಾ ಆಯೋಗ ನೋಟಿಸ್

SCROLL FOR NEXT