ವಸುಧಾ ಚಕ್ರವರ್ತಿ 
ರಾಜ್ಯ

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ ಉಡುಪಿಯ ಕೊಲ್ಲೂರಿಗೆ ತೆರಳಿದ್ದರು.

ಉಡುಪಿ: ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ (Vasudha Chakravarthy) ಉಡುಪಿಯ (Udupi) ಕೊಲ್ಲೂರಿಗೆ ತೆರಳಿದ್ದರು. ಕೊಲ್ಲೂರಿನ ವಸತಿಗೃಹವೊಂದರ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ವಸುಧಾ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 27ರಂದು ಕಾರಿನಲ್ಲಿ ಕೊಲ್ಲೂರಿಗೆ ಬಂದಿದ್ದರು. ಇನ್ನು ಕರೆ ಮಾಡಿದಾಗ ಮಗಳು ಕರೆ ಸ್ವೀಕರಿಸಲಿಲ್ಲ ಎಂದು ಆಕೆಯ ತಾಯಿ ಆ. 29ರಂದು ಕೊಲ್ಲೂರಿಗೆ ಬಂದು ದೇವಸ್ಥಾನದ ಸಿಬ್ಬಂದಿಗೆ ವಿಚಾರ ತಿಳಿಸಿದ್ದರು.

ವಸತಿ ಗೃಹದ ಬಳಿ ಅವರ ಕಾರು ಪತ್ತೆಯಾಗಿತ್ತು. ಹೀಗಾಗಿ ಕೊಲ್ಲೂರು ಠಾಣೆಯಲ್ಲಿ ಮಹಿಳೆ ನಾಪತ್ತೆ ಕುರಿತು ಪ್ರಕರಣ ದಾಖಲಿಸಿಕೊಂಡು ಸೌಪರ್ಣಿಕಾ ನದಿ ಪರಿಸರದಲ್ಲಿ ಹುಡುಕಾಟ ನಡೆಸಲಾಗಿತ್ತು. ಇದೀಗ ಎರಡು ದಿನಗಳ ಬಳಿಕ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಶವ ಪತ್ತೆಯಾಗಿದೆ. ವಸುಧಾ ಅವರು ಈಜು ಪಟುವಾಗಿದ್ದು ವೇಗವಾಗಿ ಹರಿಯುತ್ತಿದ್ದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದರೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತಿಳಿದುಬಂದಿಲ್ಲ. ಸ್ಥಳೀಯರು ನದಿಗೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

ಕೇರಳ ಸಿಎಂ ಆಯ್ಕೆ: ಕೆಸಿ ವೇಣುಗೋಪಾಲ್ ರಾಹುಲ್ ಗಾಂಧಿಯ ಆದ್ಯತೆ; ಕುತೂಹಲ ಮೂಡಿಸಿದ ಖಾಸಗಿ ಭೇಟಿ!

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ': ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

ಸಿಎಂ ಪದಗ್ರಹಣ ಕಾರ್ಯಕ್ರಮ: ಸೂಟ್ ಧರಿಸಿ 74 ವರ್ಷಗಳ ತಮಿಳು ಪರಂಪರೆ, ಸಂಪ್ರದಾಯ ಮುರಿದ ವಿಜಯ್!

ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಅವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಪ್ರಧಾನಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

SCROLL FOR NEXT