ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು- ಸಿಎಂ ಸಿದ್ದರಾಮಯ್ಯ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮತ್ತು "ಉಪ್ಪಾರ ಸಮುದಾಯ ಭವನದ" ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು: ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಘೋಷಿಸಿದ್ದಾರೆ.

ಇಂದು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮತ್ತು "ಉಪ್ಪಾರ ಸಮುದಾಯ ಭವನದ" ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪ್ಪಾರ ಸಮುದಾಯದ ಕುಲಶಾಸ್ತ್ರಿಯ ಅಧ್ಯಯನ ವರದಿಯು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಲಾಗುವುದು ಮತ್ತು ನಂತರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ಉಪ್ಪಾರ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿದೆ. ಈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಇದೇ ವೇಳೆ ಅಪೂರ್ಣಗೊಂಡಿರುವ ಉಪ್ಪಾರ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಬಳಿಕ ಮಾತನಾಡಿದ ಹೊಸದುರ್ಗದ ಭಗೀರಥ ಮಹಾಸಂಸ್ಥಾನ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಸಮುದಾಯವದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇಲ್ಲಿ ಶಾಖಾ ಮಠ ಹಾಗೂ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಐದು ಎಕರೆ ಭೂಮಿ ನೀಡಬೇಕು ಎಂದು ಕೇಳಿಕೊಂಡರು.

ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಯತೀಂದ್ರ ಸಿದ್ದರಾಮಯ್ಯ, ದರ್ಶನ್ ದೃವನಾರಾಯಣ್, ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು ಸೇರಿದಂತೆ ಉಪ್ಪಾರ ಸಮುದಾಯದ ಮುಖಂಡರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

ದಶಕಗಳ ಪ್ರಯತ್ನಕ್ಕೆ Trump ಕೊಳ್ಳಿ ಇಟ್ಟಿದ್ದಾರೆ: ಅಧ್ಯಕ್ಷನ ಆತುರ ನಿರ್ಧಾರಗಳೇ ಭಾರತ-ರಷ್ಯಾ-ಚೀನಾ ದೋಸ್ತಿಗೆ ಕಾರಣ!

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್?: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ವರ್ಲ್ಡ್ ಟ್ರಾನ್ಸ್‌ಪ್ಲಾಂಟ್ ಗೇಮ್ಸ್: 63 ಪದಕ ಪಡೆದು ಮಿಂಚಿದ ಭಾರತದ ಕ್ರೀಡಾಪಟುಗಳು!

Cricket: 'Alcohol, Pornography...': ಡ್ರೀಮ್11 ಹೊರಕ್ಕೆ, ಜೆರ್ಸಿ ಸ್ಪಾನ್ಸರ್‌ಗೆ BCCI ಅರ್ಜಿ ಆಹ್ವಾನ, ಡೆಡ್‌ಲೈನ್ ನಿಗದಿ, ಅರ್ಹತೆ ಏನು?

SCROLL FOR NEXT