ಸಿದ್ದರಾಮಯ್ಯ 
ರಾಜ್ಯ

ಶೇ. 50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ: ಸಿಎಂ ಸಿದ್ದರಾಮಯ್ಯ

ಗ್ರಾಮದಿಂದ ರಾಜಧಾನಿಗೆ ಹೀಗೆ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎನ್ನುವುದು ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ.

ಬೆಂಗಳೂರು: ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಚಾಲನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದರು.

ಗ್ರಾಮದಿಂದ ರಾಜಧಾನಿಗೆ ಹೀಗೆ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎನ್ನುವುದು ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74 ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಬಿಜೆಪಿಯ ರಾಮಾಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿಯನ್ನು ತಿರಸ್ಕರಿಸಿತು. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ನಾಮಕಾವಾಸ್ಥೆಗೆ ಪ್ರಧಾನಿ ಅವರ ಹೆಸರಿನಲ್ಲಿದೆ.

ಇದರಲ್ಲಿ ರಾಜ್ಯದ ಪಾಲೇ ಹೆಚ್ಚು. ಕೇಂದ್ರದಿಂದ ಇನ್ನೂ 13 ಸಾವಿರ ಕೋಟಿ ಹಣ ರಾಜ್ಯಕ್ಕೆ ವಾಪಾಸ್ ಬರಬೇಕಿದೆ. ಕೇಂದ್ರ ಮಾಡುವ ಅನ್ಯಾಯವನ್ನು ರೈತರು ಮತ್ತು ರಾಜ್ಯದ ಜನತೆ ವಿರೋಧಿಸಬೇಕು. ಕಬ್ಬಿನ ದರ ನಿಗಧಿಯಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ರೈತರಿಗೆ ಅನ್ಯಾಯವಾಯಿತು. ಆದರೂ ರಾಜ್ಯ ಸರ್ಕಾರ ಸರಿದೂಗಿಸಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸ್ಪಂದಿಸಿ ಪರಿಹಾರ ನೀಡಿತು ಎಂದು ಹೇಳಿದರು.

ಇ-ಸ್ವತ್ತು ತಂತ್ರಾಂಶದಿಂದ ಸದ್ಯ 1,778 ಕೋಟಿ ತೆರಿಗೆ ಆದಾಯ ಹೆಚ್ಚಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿ ಆದರೆ, ಆದಾಯದ ಪ್ರಮಾಣ 2,000 ಕೋಟಿ ಮೀರುವ ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕ‌ ಭಾಗದಲ್ಲಿ 8860ಕಿಮೀ ಕಲ್ಯಾಣ ಪಥಕ್ಕೆ ಚಾಲನೆ ನೀಡಿದ್ದು ನಮ್ಮ ಸರ್ಕಾರ. ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು, ಬಿಜೆಪಿಯವರು ಜನಪರ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತರಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಭಾಗ್ಯಗಳು, ನಮ್ಮ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿನ ಭದ್ರತೆಗಾಗಿ ಜಾರಿ ಮಾಡಿದ್ದು. ಬಿಜೆಪಿಯ ಬುರುಡೆ ಗ್ಯಾಂಗ್ ಇಂತಹ ಯಾವುದೇ ಕಾರ್ಯಕ್ರಮ ನೀಡದೆ ಜನರ ಎದುರು ಬುರುಡೆ ಬಿಡುತ್ತಾ ತಿರುಗುತ್ತಿದ್ದಾರೆ‌.

ನಾನೂ ತಾಲ್ಲೂಕ ಬೋರ್ಡ್ ಸದಸ್ಯನಾಗಿ ಈಗ ಮುಖ್ಯಮಂತ್ರಿವರೆಗೂ ಬೆಳೆದಿದ್ದೇನೆ. ಹೀಗಾಗಿ ಗ್ರಾಮ ಪಂಚಾಯ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಹೆಚ್ಚೆಚ್ಚು ಶಕ್ತಿಯುತವಾಗಬೇಕು ಎನ್ನುವುದು ನನ್ನ ಗುರಿಯೂ ಆಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಗ್ರಾಮ ಕರ್ನಾಟಕ ಅಭಿವೃದ್ಧಿ ಕಾಣುತ್ತದೆ ಎಂದು ಸಿಎಂ ಭರವಸೆ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳಿದ್ದಂತೆ: ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ!

HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..! ಕಾರಣ ಏನು ಗೊತ್ತಾ?

Video: ಹೊಟೆಲ್ ಲಾಬಿಯಲ್ಲಿ ಗಂಭೀರ್-ರೋಹಿತ್ ಶರ್ಮಾ ಮಾತಿನ ಚಕಮಕಿ; ಕೋಚ್ ಅನ್ನೇ ನಿರ್ಲಕ್ಷಿಸಿದ್ರಾ Kohli!

ಬೆಂಗಳೂರು, ದೆಹಲಿ ಸೇರಿ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ GPS ಸ್ಪೂಫಿಂಗ್: ರಾಜ್ಯಸಭೆಗೆ ಕೇಂದ್ರ ಮಾಹಿತಿ

SCROLL FOR NEXT