ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ಕೂಡಲೇ 67 ವರ್ಷ ವಯಸ್ಸಿನ ಆರ್ ವಿ ದೇವರಾಜ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಅವರನ್ನು ಜಯದೇವ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.
ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗಿದೆ.