ಕಾಡಸಿದ್ದೇಶ್ವರ ಶ್ರೀ 
ರಾಜ್ಯ

ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳಿದ್ದಂತೆ: ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ!

ಬಸವ ತತ್ವದ ಕೆಲ ಸ್ವಾಮೀಜಿಗಳು 'ತಾಲಿಬಾನಿಗಳು' ಎಂದು ಹೇಳುವ ಮೂಲಕ ಕನ್ಹೇರಿ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಬೀದರ್: ಬಸವ ತತ್ವದ ಕೆಲ ಸ್ವಾಮೀಜಿಗಳು 'ತಾಲಿಬಾನಿಗಳು' ಎಂದು ಹೇಳುವ ಮೂಲಕ ಕನ್ಹೇರಿ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹನುಮ ಮಾಲೆ ಹಾಕಿಕೊಳ್ಳುವವರು ಯಾವಾಗಲೂ ಯಾರಿಗೂ ಕೆಟ್ಟದ್ದು ಮಾಡುವವರಲ್ಲ. ಯಾರನ್ನೂ ತಪ್ಪು ದಾರಿಗೆ ಕೂಡ ಎಳೆಯುವುದಿಲ್ಲ ಎಂದು ಹೇಳಿದರು.

ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಕೆಲ ಬಸವ ತತ್ವದ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡುತ್ತಾರೆ. ನಮ್ಮ ಹುಡುಗಿಯರನ್ನು ಎತ್ತಾಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಆರತಿ ಬೆಳಗಿ ನಿಮ್ಮನ್ನು ಮನೆಗೆ ಕರೆದುಕೊಂಡು ಬರಬೇಕಾ? ಅವರನ್ನು ಹಿಡಿದುಕೊಂಡು ಬಂದು ಅವರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು ಎಂದೂ ಸ್ವಾಮೀಜಿ ಪ್ರಶ್ನಿಸಿದರು. ರಾತ್ರಿ ವೇಳೆ ಟೀ ಶರ್ಟ್, ಬರ್ಮೋಡ ಹಾಕಿ ಹೋಟೆಲ್, ಬಾರ್‌ಗೆ ಹೋಗುವವರಿಗೆ ಮಠವೇಕೆ? ಇಂಥವರಿಗೆ ಸನ್ಯಾಸತ್ವ ಯಾಕೆ ಬೇಕು. ಹೀಗಿರುವವರು ಮಠ ಬಿಟ್ಟು ಹೋಗಿ ಎಂದಿದ್ದಾರೆ. ಕಾಡಸಿದ್ದೇಶ್ವರ ಸ್ವಾಮೀಜಿ ಈ ಹಿಂದೆಯೂ ಲಿಂಗಾಯತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಡಾ. ಚನ್ನಬಸವಾನಂದ ಸ್ವಾಮೀಜಿ, ಆ ಪದ ಬಳಸಲು ಅವರು ಅಯೋಗ್ಯರು. ಅವರನ್ನು ಸ್ವಾಮೀಜಿ ಅಂತ ಕರೆಯಲು ನನಗೆ ನಾಚಿಕೆ ಆಗುತ್ತದೆ. ಅವರು ಕಾಡಸಿದ್ದೇಶ್ವರ ಸ್ವಾಮೀಜಿ ಅಲ್ಲ, ಅದು ಕಾಡು ಪ್ರಾಣಿ. ಅವರ ನಾಲಿಗೆಗೆ ಸಂಸ್ಕಾರ ಇಲ್ಲ. ಬಾಯಿ ಬಿಚ್ಚಿದರೆ ಬೈಗುಳಗಳೇ ಉದುರುತ್ತವೆ. ಇಂತಹವರು ಕಾವಿ ಬಟ್ಟೆ ಹಾಕಲು ಅಯೋಗ್ಯರು, ನಾಲಾಯಕರಾಗಿದ್ದಾರೆ' ಎಂದು ಖಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

ಇ-ಸ್ಟ್ಯಾಂಪ್‌ ಹೋಯ್ತು.. 'ಡಿಜಿಟಲ್ ಇ-ಸ್ಟ್ಯಾಂಪ್‌' ಬಂತು... ಕರ್ನಾಟಕದಲ್ಲಿ ಮಹತ್ವದ ಬದಲಾವಣೆ! ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..! ಕಾರಣ ಏನು ಗೊತ್ತಾ?

Video: ಹೊಟೆಲ್ ಲಾಬಿಯಲ್ಲಿ ಗಂಭೀರ್-ರೋಹಿತ್ ಶರ್ಮಾ ಮಾತಿನ ಚಕಮಕಿ; ಕೋಚ್ ಅನ್ನೇ ನಿರ್ಲಕ್ಷಿಸಿದ್ರಾ Kohli!

ಬೆಂಗಳೂರು, ದೆಹಲಿ ಸೇರಿ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ GPS ಸ್ಪೂಫಿಂಗ್: ರಾಜ್ಯಸಭೆಗೆ ಕೇಂದ್ರ ಮಾಹಿತಿ

SCROLL FOR NEXT