ವಿ ಸೋಮಣ್ಣ 
ರಾಜ್ಯ

ಜಲಜೀವನ್‌ ಮಿಷನ್‌: 99 ಗುತ್ತಿಗೆದಾರರ ವಿರುದ್ಧ ಕ್ರಮ; ಕೇಂದ್ರ ಸಚಿವ ವಿ.ಸೋಮಣ್ಣ

ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 169 ದೂರುಗಳು ಸಲ್ಲಿಕೆಯಾಗಿವೆ. ಒಂಬತ್ತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗಿದೆ ಎಂದರು.

ನವದೆಹಲಿ: ಜಲಜೀವನ್‌ ಮಿಷನ್‌ ಯೋಜನೆಯಲ್ಲಿ ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯದ 99 ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಲೋಕಸಭೆಯಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ‌ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 169 ದೂರುಗಳು ಸಲ್ಲಿಕೆಯಾಗಿವೆ. ಒಂಬತ್ತು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣದ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲಾಗಿದೆ ಎಂದರು.

ಯೋಜನೆಯ ಅನುಷ್ಠಾನದಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ 32 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಂದ 17,036 ದೂರುಗಳು ಬಂದಿವೆ. ಈ ಪೈಕಿ ಶೇ 8ರಷ್ಟು ದೂರುಗಳು ಉತ್ತರ ಪ್ರದೇಶದಿಂದಲೇ (14,212) ಸಲ್ಲಿಕೆಯಾಗಿವೆ. ಈ ರಾಜ್ಯದಲ್ಲಿ 171 ಅಧಿಕಾರಿಗಳು ಹಾಗೂ 119 ಗುತ್ತಿಗೆದಾರರ ವಿರುದ್ಧ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

SCROLL FOR NEXT