ಕೆ.ಜೆ ಜಾರ್ಜ್ 
ರಾಜ್ಯ

ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣದಲ್ಲಿ ಸಚಿವ ಕೆ.ಜೆ ಜಾರ್ಜ್ ​​ಗೆ ರಿಲೀಫ್: ದೂರು ರದ್ದುಪಡಿಸಿದ ಹೈಕೋರ್ಟ್​​

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ.

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ.

ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್​​ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ.

ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್‌ಡಿಎಸ್‌ಎಸ್‌ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ.

ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

SCROLL FOR NEXT