ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರ ಸವಿದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಉಭಯ ನಾಯಕರು ಒಟ್ಟಿಗೆ ಸೇರುವುದು ಒಳ್ಳೆಯದು. ನಮಗೆ ಬೇಕಾಗಿರುವುದು ಆದೇ ಎಂದರು.
ಕಳೆದೊಂದು ತಿಂಗಳಿನಿಂದ ಏನು ನಡೆಯಿತೋ ಅದನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವುದು. ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ನಾವು ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ. ನಂತರ ಒಟ್ಟಿಗೆ ಭೋಜನ ಮಾಡುತ್ತೇವೆ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ವಿಭಿನ್ನ ಜನರು ವಿಭಿನ್ನ ಆಕಾಂಕ್ಷೆಗಳನ್ನು ಹೊಂದಿರುತ್ತಾರೆ. ಅದು ತಪ್ಪೆಂದು ನಾನು ಭಾವಿಸುವುದಿಲ್ಲ. ಸ್ವಾಭಾವಿಕವಾಗಿ, ಸಮಯ ಬಂದಾಗ ಅವರು ತಮ್ಮ ಆಕಾಂಕ್ಷೆಗಳನ್ನು ವ್ಯಕ್ತಪಡಿಸುತ್ತಾರೆ ಎಂದು ಅವರು ಹೇಳಿದರು.