ಚಾಮರಾಜನಗರ ಆಕ್ಸಿಜನ್ ದುರಂತ (ಸಂಗ್ರಹ ಚಿತ್ರ) 
ರಾಜ್ಯ

ಚಾಮರಾಜನಗರ ಆಕ್ಸಿಜನ್ ದುರಂತ: ಕುನ್ಹಾ ನೇತೃತ್ವದ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಮೇ 2, 2021 ರ ಮಧ್ಯರಾತ್ರಿ ಹಾಗೂ ಮೇ 3, 2021 ರ ಬೆಳಗಿನ ಜಾವದ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 36 ಮಂದಿ ಮೃತಪಟ್ಟಿದ್ದರು.

ಬೆಂಗಳೂರು: ಕೋವಿಡ್ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಅಂತಿಮ ತನಿಖಾ ವರದಿಯನ್ನು ನ್ಯಾ.ಮೈಕಲ್ ಡಿ. ಕುನ್ಹಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು, ವರದಿ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಸೋಮವಾರ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸಕ್ಕೆ ಆಗಮಿಸಿದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು 165 ಪುಟಗಳ ಪರಿಷ್ಕೃತ ವರದಿಯನ್ನು ಸಲ್ಲಿಕೆ ಮಾಡಿದರು. ವರದಿಯಲ್ಲಿ ಆಸ್ಪತ್ರೆಯಲ್ಲಿ ಕರ್ತವ್ಯಲೋಪ ಎಸಗಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗಿದೆ.

ಮೇ 2, 2021 ರ ಮಧ್ಯರಾತ್ರಿ ಹಾಗೂ ಮೇ 3, 2021 ರ ಬೆಳಗಿನ ಜಾವದ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 36 ಮಂದಿ ಮೃತಪಟ್ಟಿದ್ದರು. ಆಕ್ಸಿಜನ್ ಕೊರತೆ ಕಾರಣದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರೋಗಿಗಳು ಮೃತಪಟ್ಟಿದ್ದರು. ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಘಟನೆಯ ಕುರಿತು ನ್ಯಾಯಾಂಗ ಆಯೋಗದ ತನಿಖೆಗಾಗಿ ನ್ಯಾ. ಬಿ.ಎ. ಪಾಟೀಲ್ ಆಯೋಗ ರಚನೆ ಮಾಡಲಾಗಿತ್ತು.

ಕಾಂಗ್ರೆಸ್ ಸರ್ಕಾರ ಈ ಆಯೋಗದ ವರದಿಯನ್ನು ತಿರಸ್ಕರಿಸಿತ್ತು. ಮರು ತನಿಖೆಯ ಜವಾಬ್ದಾರಿಯನ್ನು ನ್ಯಾ. ಜಾನ್ ಮೈಕೆಲ್ ಡಿ'ಕುನ್ಹಾ ಆಯೋಗಕ್ಕೆ ವಹಿಸಲಾಗಿತ್ತು. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಡಾ. ಕೆ ಸುಧಾಕರ್ ವಿರುದ್ಧ ರಾಜಕೀಯ ದ್ವೇಷ ಸಾಧಿಸಲಾಗಿತ್ತಿದೆ ಎಂಬ ಆರೋಪ ಮಾಡಲಾಗಿತ್ತು. ಆದರೆ ಇದೀಗ ಅಂತಿಮ ವರದಿಯನ್ನು ಏನೆಲ್ಲಾ ವಿಚಾರಗಳನ್ನು ಉಲ್ಲೇಖಿಸಲಾಗಿದೆ ಎಂಬುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್