ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ.

ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ.

ನವೆಂಬರ್ 23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ.

ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!