ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದ್ದು ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ಕೋರ್ಟ್ ನಿರ್ಧರಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲ ಬಾಲನ್ ಗೆ ಕೋರ್ಟ್ನಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿ 7 ಆರೋಪಿಗಳು ಹಾಜರಾಗಿದ್ದರು. ಸಾಕ್ಷಿಗಳ ಪಟ್ಟಿಯನ್ನು ಸಹಾಯಕ ಎಸ್ಪಿಪಿ ಸಚಿನ್ ಅವರು ಕೋರ್ಟ್ಗೆ ಸಲ್ಲಿಸಿದರು. ಪ್ರತ್ಯಕ್ಷ ಸಾಕ್ಷಿಗಳು, FSL ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಡಿಸೆಂಬರ್ 17ರಂದು ವಿಚಾರಣೆ ಶುರು ಆಗಲಿದ್ದು ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ನೀಡಲಾಗಿದೆ. ಈ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.