ಶಿವಕುಮಾರ್ ಧರಿಸಿರುವ ಕಾರ್ಟಿಯರ್ ವಾಚ್ 
ರಾಜ್ಯ

ಇಷ್ಟವಾದ ವಾಚ್‌ ಧರಿಸುವ ಹಕ್ಕು ನಮಗಿದೆ: ನನ್ನ Watch ಬೆಲೆ 24 ಲಕ್ಷ, ಆಸ್ಟ್ರೇಲಿಯಾದಲ್ಲಿ ಖರೀದಿಸಿದ್ದ; DKS

ನಮ್ಮ ತಂದೆಗೆ ವಾಚ್‌ಗಳೆಂದರೆ ಬಹಳ ಇಷ್ಟ. ಅವರ ಬಳಿ 7 ವಾಚ್‌ಗಳಿದ್ದವು. ಅವರ ನಿಧನದ ನಂತರ ಅದನ್ನು ಯಾರು ಧರಿಸಬೇಕು? ನಾನು ಧರಿಸಬೇಕು, ಇಲ್ಲವೇ ನನ್ನ ತಮ್ಮ ಧರಿಸಬೇಕು ಎಂದರು. ಸಿಎಂಗೆ ಅವರ ಮಗ ಆ ವಾಚ್‌ ಕೊಡಿಸಿರಬಹುದು .

ಬೆಂಗಳೂರು: ನನಗೆ ಮತ್ತು ಮುಖ್ಯಮಂತ್ರಿಗಳಿಗಿಬ್ಬರಿಗೂ ನಮಗಿಷ್ಟವಾದ ವಾಚ್‌ ಧರಿಸುವ ಹಕ್ಕು ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಒಂದು ದಿನದ ಹಿಂದಷ್ಟೇ ಸಿಎಂ ಮತ್ತು ತಾವು ದುಬಾರಿ ವಾಚ್‌ ಧರಿಸಿರುವ ಬಗ್ಗೆ ಬಿಜೆಪಿ ಜೆಡಿಎಸ್‌ ಟೀಕೆ ಮಾಡುತ್ತಿದೆ ಎಂದಾಗ, ನಾನು ಈ ನನ್ನ ವಾಚ್‌ನ್ನು 7 ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿಸಿದ್ದೆ. ನಾನು ಇದನ್ನು ನನ್ನ ಕ್ರೆಡಿಟ್‌ ಕಾರ್ಡ್ ಮೂಲಕ 24 ಲಕ್ಷ ರೂ. ಕೊಟ್ಟು ಖರೀದಿಸಿದ್ದೇನೆ. ಬೇಕಿದ್ದರೆ ನನ್ನ ಕ್ರೆಡಿಟ್ ಕಾರ್ಡ್ ಪರಿಶೀಲಿಸಿ. ಇದನ್ನು ನನ್ನ ಚುನಾವಣಾ ಅಫಿಡವಿಟ್‌ನಲ್ಲೂ ಘೋಷಿಸಿಕೊಂಡಿದ್ದೇನೆ ಎಂದರು.

ನಮ್ಮ ತಂದೆಗೆ ವಾಚ್‌ಗಳೆಂದರೆ ಬಹಳ ಇಷ್ಟ. ಅವರ ಬಳಿ 7 ವಾಚ್‌ಗಳಿದ್ದವು. ಅವರ ನಿಧನದ ನಂತರ ಅದನ್ನು ಯಾರು ಧರಿಸಬೇಕು? ನಾನು ಧರಿಸಬೇಕು, ಇಲ್ಲವೇ ನನ್ನ ತಮ್ಮ ಧರಿಸಬೇಕು ಎಂದರು. ಸಿಎಂಗೆ ಅವರ ಮಗ ಆ ವಾಚ್‌ ಕೊಡಿಸಿರಬಹುದು ಅಥವಾ ಅವರೇ ಅದನ್ನು ಖರೀದಿಸಿರಲೂಬಹುದು. ಅಷ್ಟಕ್ಕೂ ನನಗಾಗಲಿ, ಸಿದ್ದರಾಮಯ್ಯ ಅವರಿಗಾಗಲಿ ನಮಗೆ ಇಷ್ಟವಾದ ವಾಚ್ ಧರಿಸುವ ಹಕ್ಕು ಇದೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ನಿವಾಸದಲ್ಲಿ ಡಿಸೆಂಬರ್ 2ರಂದು ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇಟ್ ಟು ಸೇಮ್ ವಾಚ್ ಕಟ್ಟಿ ಗಮನಸೆಳೆದಿದ್ದರು. ಕಾರ್ಟಿಯರ್ ಬ್ರ್ಯಾಂಡ್ ವಾಚ್ ಬೆಲೆ 43 ಲಕ್ಷ ರೂಪಾಯಿ ಎಂದು ವರದಿಯಾಗಿತ್ತು. ಇದರ ಬೆನ್ನಲ್ಲೇ ಇಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಾನೇ 24 ಲಕ್ಷ ರೂಪಾಯಿ ಕೊಟ್ಟು ಖರೀದಿಸಿದ ವಾಚ್ ಇದು ಎಂದಿದ್ದಾರೆ.

ದುಬಾರಿ ವಾಚ್ ಕುರಿತು ಸಿದ್ದರಾಮಯ್ಯನವರನ್ನೂ ಟೀಕಿಸಲಾಗುತ್ತಿದೆ ಎಂಬ ಆರೋಪಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯರನ್ನು ಬಿಜೆಪಿ ಗುರಿಯಾಗಿಸಿರುವ ವಿಚಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯನವರಿಗೆ ವಾಚ್ ಹಾಕಿಕೊಳ್ಳುವ ಅಧಿಕಾರ ಇದೆ, ಇಷ್ಟೇ ಅಲ್ಲ ವಾಚ್ ಖರೀದಿಸುವ ತಾಖತ್ತು ಕೂಡ ಇದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಂಪೇಗೌಡ ಏರ್ ಪೋರ್ಟ್ ಲ್ಲಿ 62 ವಿಮಾನ ಸೇರಿ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು; ಕಾರಣವೇನು?: ತನಿಖೆ ಆರಂಭಿಸಿದ DGCA

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ 'ಯೂ ಟರ್ನ್', ಮಧ್ಯಮ ವರ್ಗದ ಜನರಿಗೆ ಸಿಕ್ಕ ಅಪರೂಪದ ಜಯ! ಹೇಗೆ?

ಆಪರೇಷನ್ ಟ್ರೈಡೆಂಟ್: ಭಾರತ ಏಕೆ ಡಿಸೆಂಬರ್ 4ರಂದು ನೌಕಾಪಡೆಯ ದಿನವನ್ನು ಆಚರಿಸುತ್ತದೆ?

ನನ್ನ ಜ್ಯೋತಿಷಿ ಗುರುಗಳಿಗೆ 4 ನೇ ಹಂತದ ಕ್ಯಾನ್ಸರ್ ಇದೆ: ನಿದ್ರೆ ಇಲ್ಲದ ರಾತ್ರಿ ಕಳೆದಿದ್ದೇನೆ, ಕೌತುಕ ಹುಟ್ಟಿಸಿದ ರಾಜ್ ನಿಡಿಮೋರು ಮಾಜಿ ಪತ್ನಿ!

ಇಂದು ಸಂಜೆ ರಷ್ಯಾ ಅಧ್ಯಕ್ಷ Vladimir Putin ಭಾರತಕ್ಕೆ ಆಗಮನ: ರಾತ್ರಿ ಪ್ರಧಾನಿ ಮೋದಿಯಿಂದ ಖಾಸಗಿ ಔತಣಕೂಟ

SCROLL FOR NEXT