ನೌಕಾನೆಲೆ ಬಳಿ ಚಿರತೆ ಕಾಣಿಸಿಕೊಂಡಿರುವುದು. 
ರಾಜ್ಯ

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ

ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಕದಂಬ ನೌಕಾನೆಲೆ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳನ್ನು ಮನೆಯೊಳಗೆ ಇರುವಂತೆ ಎಚ್ಚರಿಕೆ ನೀಡಲಾಗಿದೆ.

ವಿಡಿಯೋದಲ್ಲಿ ಆರ್ಗಾದಲ್ಲಿರುವ ನೌಕಾಪಡೆ ಸಿಬ್ಬಂದಿ ವಸತಿ ನಿಲಯದ ಬಳಿ ಚಿರತೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ,

ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಆಪಾಯಗಳು ಸಂಭವಿಸಿರಲಿಲ್ಲ. ಚಿರತೆಯ ಜೊತೆಗೆ ಕಾಡುಹಂದಿಗಳು ಮತ್ತು ಇತರ ಪ್ರಾಣಿಗಳು ಕೂಡ ಕಾಣಿಸಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ, ಸ್ಥಳೀಯ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸಲಹೆ ನೀಡಿದೆ. ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಮುಂಗಾರು ಕೊರತೆ: ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ, ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

username feature: ವಾಟ್ಸಾಪ್ ಬಳಿಕ ಟೆಲಿಗ್ರಾಮ್, ಸಿಗ್ನಲ್ ಗೆ ಕೇಂದ್ರದ ನೋಟಿಸ್!

ಬಂಡಾಯ ಬಣದಿಂದ ECI ಮುಂದೆ ಪಕ್ಷದ ಮೇಲೆ ಹಕ್ಕು ಮಂಡನೆ: ತೀವ್ರಗೊಂಡ ಟಿಎಂಸಿ ಆಂತರಿಕ ಕಲಹ

ಪಾಕ್ ಸೇನೆ ಕಾಶ್ಮೀರಿಗಳಿಗೆ ಕೈಗೆ ಬಂದೂಕು ನೀಡಿ, ಈಗ ಅವರನ್ನು ಉಗ್ರರು ಎಂದು ಕರೆಯುತ್ತಿದೆ: POK ನಾಯಕ

ಮಂಡ್ಯ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಂದ ಪತಿ!