ಆರೋಪಿ ಜಬೀವುಲ್ಲಾ 
ರಾಜ್ಯ

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರಿನಿಂದ 11 ಲಕ್ಷ ರೂಪಾಯಿ ಕದ್ದ ಕಾನ್ ಸ್ಟೇಬಲ್!

ಪೊಲೀಸ್ ಮೂಲಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ಜಬಿವುಲ್ಲಾ ಎಂದು ಗುರುತಿಸಲಾಗಿದ್ದು, ಅವರು ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಡಿಯಲ್ಲಿ ಸಿಸಿಪಿಎಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ನಾಣ್ಣುಡಿಯಂತೆ ಸೈಬರ್ ಅಪರಾಧ ಪೊಲೀಸ್ ಠಾಣೆ (ಸಿಸಿಪಿಎಸ್) ಗೆ ಸೇರಿದ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಅಪರಾಧ ಪ್ರಕರಣದ ಆರೋಪಿಯೊಬ್ಬರ ಕಾರಿನಿಂದ 11 ಲಕ್ಷ ರೂ.ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ, ಕಾರನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ವಶಪಡಿಸಿಕೊಂಡು ನಿಲ್ಲಿಸಲಾಗಿತ್ತು.

ಪೊಲೀಸ್ ಮೂಲಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ಜಬಿವುಲ್ಲಾ ಎಂದು ಗುರುತಿಸಲಾಗಿದ್ದು, ಅವರು ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಡಿಯಲ್ಲಿ ಸಿಸಿಪಿಎಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ನವೆಂಬರ್ 13 ರಂದು ಸೈಬರ್ ಅಪರಾಧ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ ಅವರ ಕಾರನ್ನು ವಶಪಡಿಸಿಕೊಂಡಿದ್ದರು. ಆರೋಪಿಯನ್ನು ವಶಕ್ಕೆ ಪಡೆಯಲಾಯಿತು, ಆದರೆ ಅವರ ಕಾರು ಚಾಲಕ ಎರಡು ಬ್ಯಾಗ್‌ಗಳಲ್ಲಿ ಒಂದು ಬ್ಯಾಗ್ ಅನ್ನು ಕಾರಿನಿಂದ ತೆಗೆದುಕೊಂಡಿದ್ದ.

ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ. ಹಣದ ಬ್ಯಾಗ್ ಅನ್ನು ಹೆಡ್ ಕಾನ್ಸ್‌ಟೇಬಲ್‌ ಜಬೀವುಲ್ಲಾ ಎಂಬಾತ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ ತನಗೇನೂ ಗೊತ್ತೇ ಇಲ್ಲ ಎನ್ನುವಂತೆ ಜಬೀವುಲ್ಲಾ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಇತ್ತ ಆರೋಪಿಯನ್ನು ಬಂಧಿಸಿದ್ದ ಇನ್‌ಸ್ಪೆಕ್ಟರ್ ಉಮೇಶ್ ಮತ್ತು ಟೀಂ ಆತನನ್ನು ಜೈಲಿಗಟ್ಟಿತ್ತು. ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ತನ್ನ ಕಾರಿನಲ್ಲಿ ಇದ್ದ ಹಣದ ಬ್ಯಾಗ್ ನಾಪತ್ತೆ ಆಗಿರುವುದನ್ನ ನೋಡಿ ಈ ಬಗ್ಗೆ ಸೈಬರ್ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾನೆ. ಪರಿಶೀಲನೆ ಮಾಡಿದಾಗ, ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಜಬೀವುಲ್ಲಾ ಹಣದ ಬ್ಯಾಗ್ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ದರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ.

ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ. ಮನೆ ಸರ್ಚ್‌ ಮಾಡಿದಾಗ ಆತನ ಕೋಣೆಯ ಬೆಡ್ ಕೆಳಗೆ ಲಕ್ಷ ಲಕ್ಷ‌ ಹಣ ಜೋಡಿಸಿಟ್ಟಿದ್ದು ಬಯಲಾಗಿದೆ. ಅಲ್ಲದೇ ಕದ್ದ ಹಣದಿಂದಲೇ ಪತ್ನಿಗೆ ಒಡೆವೆಗಳನ್ನೂ ಕೊಡಿಸಿದ್ದ ಅನ್ನೋದು ಕಂಡುಬಂದಿದೆ. ಕದ್ದ 11 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡು ಆರೋಪಿಗೆ ಹಿಂತಿರುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, "ನಾನು ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ ಮತ್ತು ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo flights: ಮತ್ತೆ 500 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೋ ಏರ್‌ಲೈನ್ಸ್‌, ವಿಮಾನಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ

H-1B visa ನಿಯಮದಲ್ಲಿ ಅಮೆರಿಕಾ ಮಹತ್ವದ ಬದಲಾವಣೆ: ಇನ್ನು ಮುಂದೆ ಅರ್ಜಿದಾರರ "social media" ಖಾತೆ ಪಬ್ಲಿಕ್ ಇದ್ದರಷ್ಟೇ ವೀಸಾ..!

ವಿಶ್ವದ ಶ್ರೀಮಂತ ವ್ಯಕ್ತಿಯ ಬ್ರಿಟೀಷ್ ಕಾಲದ ಅರಮನೆ: Putin ಗೆ ಆತಿಥ್ಯ ವಹಿಸಿರುವ Hyderabad House ವಿಶೇಷತೆಗಳೇನು? ನಿರ್ಮಾಣ ಆಗಿದ್ದು ಹೇಗೆ?

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ

ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ: ರಾಜ್ಯ ಸರ್ಕಾರ ಘೋಷಣೆ

SCROLL FOR NEXT