ಮಳೆ  
ರಾಜ್ಯ

Karnataka weather: ದಿತ್ವಾ ಚಂಡಮಾರುತ ಪ್ರಭಾವ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ

ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ದಿತ್ವಾ ಚಂಡಮಾರುತ ಪ್ರಭಾವ ಇನ್ನೂ ಕಡಿಮೆಯಾಗಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಇಂದು ಬೆಳಗ್ಗೆಯಿಂದ ತುಂತುರು ಮಳೆ ಮುಂದುವರಿದಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್, ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು; ಇಡೀ ಸಂಪುಟವೇ ಚೇಂಜ್ ಸಾಧ್ಯತೆ

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ, 9 ಜೀವಗಳು ಬಲಿ.!

ಬಿಹಾರ ಮೃಗಾಲಯ, ಡೈರಿ ಸಂಸ್ಥೆಗೆ ಸಂಜಯ್ ಗಾಂಧಿ ಹೆಸರು ತೆಗೆದು ಹಾಕಿದ ಬಿಜೆಪಿ ಸರ್ಕಾರ!

SCROLL FOR NEXT