ಆತ್ಮಹತ್ಯೆಗೆ ಶರಣಾದ ವ್ಯಕ್ತಿ 
ರಾಜ್ಯ

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ; ಸಂಚಾರ ಸಹಜ ಸ್ಥಿತಿಗೆ

ಜ್ಞಾನ ಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಬೆಳಿಗ್ಗೆ 09:40 ಕ್ಕೆ ಸಾಮಾನ್ಯ ಸ್ಥಿತಿಗೆ ಮರಳಿದ್ದು, ನೇರಳೆ ಮಾರ್ಗದಲ್ಲಿ ರೈಲುಗಳು ವೇಳಾಪಟ್ಟಿಯಂತೆ ಚಲಿಸುತ್ತಿವೆ.

ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಈ ನಡುವೆ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರವು ಇದೀಗ ಪುನಃ ಸಹಜ ಸ್ಥಿತಿಗೆ ಮರಳಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಬಳಿಕ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತನಗೌಡ ಮೃತದೇಹವನ್ನು ರಾಜರಾಜೇಶ್ವರಿನಗರ ಆಸ್ಪತ್ರೆಗೆ ರವಾನಿಸಿದ್ದಾರೆ.

ದುರ್ಘಟನೆ ಹಿನ್ನೆಲೆಯಲ್ಲಿ ನೇರಳೆ ಮಾರ್ಗದ ಮೈಸೂರು ರಸ್ತೆಯಿಂದ ಚಲ್ಲಘಟ್ಟದವರೆಗಿನ ಮೆಟ್ರೋ ಸಂಚಾರವನ್ನು ಕೆಲಕಾಲ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಮೃತದೇಹವನ್ನು ಹೊರತೆಗೆದು ಸ್ಥಳಾಂತರಿಸಿದ ಬೆನ್ನಲ್ಲೇ, ಮೆಟ್ರೋ ಅಧಿಕಾರಿಗಳು ತಾಂತ್ರಿಕ ಪರಿಶೀಲನೆ ನಡೆಸಿ ಸಂಚಾರವನ್ನು ಪುನಃ ಆರಂಭಿಸಿದ್ದಾರೆ.

ಜ್ಞಾನ ಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಬೆಳಿಗ್ಗೆ 09:40 ಕ್ಕೆ ಸಾಮಾನ್ಯ ಸ್ಥಿತಿಗೆ ಮರಳಿದ್ದು, ನೇರಳೆ ಮಾರ್ಗದಲ್ಲಿ ರೈಲುಗಳು ವೇಳಾಪಟ್ಟಿಯಂತೆ ಚಲಿಸುತ್ತಿವೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT