ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಹಳಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ಪರಿಣಾಮ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಈ ಕುರಿತು ಬಿಎಂಆರ್‌ಸಿಎಲ್ ಮಾಹಿತಿ ನೀಡಿದ್ದು, ನೇರಳೆ ಮಾರ್ಗದ ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನಿಸಿರುವ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆಂದು ಹೇಳಿದೆ,
ಅಲ್ಲದೆ, ಪಂತರಪಾಳ್ಯ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್, ಕೆಂಗೇರಿ, ಛಲ್ಲಘಟ್ಟ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಪರಿಸ್ಥಿತಿ ಸರಿಯಾದ ಬಲಿಕ ಮೆಟ್ರೋ ಸಂಚಾರ ಆರಂಭಗೊಳಿಸಲಾಗುವುದು ಎಂದು ತಿಳಿಸಿದೆ.