ಸಿದ್ದರಾಮಯ್ಯ 
ರಾಜ್ಯ

ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ

ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ತಪ್ಪಲ್ಲ. ಮಾಡೇ ಮಾಡ್ತಿವಿ ಎಂದರು.

ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವುದು ಸಮಾನತೆ ತರಲು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ಜನರು ನೀವೇ ಉತ್ತರ ಕೊಡಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್ ಯಾವಾಗಲೂ ಹೇಳುತ್ತಿರುತ್ತಾರೆ, ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳು ಉಳಿಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಹೇಳಿಕೆಯನ್ನು ಉಲ್ಲೇಖಿಸಿ ಅಚ್ಚರಿ ಮೂಡಿಸಿದರು.

ಸಂವಿಧಾನ ಜಾರಿಗೆ ಬಂದು 75 ವರ್ಷ ಕಳೆದರೂ ಸಮಾಜದಲ್ಲಿ ಸಮಾನತೆ ಬಂದಿಲ್ಲ. ಶ್ರೀಮಂತರು ಶ್ರೀಮಂತರಾಗಿಯೇ ಇದ್ದಾರೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಇದನ್ನು ಅರ್ಥ ಮಾಡಿಕೊಂಡಿರುವ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆ ತೊಡದು ಹಾಕುವ ಪ್ರಯತ್ನ ಮಾಡುತ್ತಿದೆ ಎಂದರು.

ಸಮಾನತೆ, ಭ್ರಾತೃತ್ವ, ಸಮಸಮಾಜ ನಿರ್ಮಾಣ ಮಾಡಬೇಕು. ಎಲ್ಲರಿಗೂ ಸಮಾನ ಅವಕಾಶ, ಸಮಾನ ಹಕ್ಕುಗಳನ್ನು ಕೊಡಬೇಕು ಎಂದು ಅವರು ಹೇಳಿದ್ದರು. ಸಮಾನ ಅವಕಾಶ ಇಲ್ಲದಿದ್ದರೆ, ದೇಶಕ್ಕೆ ಸ್ವಾತಂತ್ರ್ಯ ಬಂದರೂ ಸಾರ್ಥಕವಾಗಲ್ಲ. ಕೇವಲ ರಾಜಕೀಯ ಸ್ವಾತಂತ್ರ್ಯ ಬಂದಲೆ ಸಾಲದು ಎಂದು ಸಿಎಂ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಜಿ ಪ್ರಧಾನಿ ದೇಶಕ್ಕೆ ಬೆದರಿಕೆ: ಇಮ್ರಾನ್ ಖಾನ್ 'ಮಾನಸಿಕ ಅಸ್ವಸ್ಥ' ಎಂದು ಘೋಷಿಸಿದ Pak ಸೇನೆ!

3rd ODI: ಭಾರತದ ವಿರುದ್ಧ ಭರ್ಜರಿ ಶತಕ; ಸಚಿನ್, ರೋಹಿತ್ ಶರ್ಮಾ ವಿಶ್ವ ದಾಖಲೆ ಮುರಿದ Quinton De Kock

ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣ

ICU ನಲ್ಲಿ 'ಇಂಡಿಯಾ ಬಣ': ಸಿಎಂ ಒಮರ್ ಅಬ್ದುಲ್ಲಾ ತೀವ್ರ ಅಸಮಾಧಾನ!

ರಾಮಾಯಣ ಖ್ಯಾತಿಯ ಸುನಿಲ್ ಲಹರಿ ಪುತ್ರನ ಜೊತೆಗೆ 'ಬಿಗ್ ಬಾಸ್ ' ಖ್ಯಾತಿಯ ಸಾರಾ ಖಾನ್ ವಿವಾಹ! ಮದುವೆ ಹೇಗಿತ್ತು ಗೊತ್ತಾ?

SCROLL FOR NEXT