ಪ್ರಧಾನಿ ಮೋದಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ (ಸಾಂದರ್ಭಿಕ ಚಿತ್ರ) 
ರಾಜ್ಯ

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್'ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ ಜಿಎಸ್'ಟಿ ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ.

ಬೆಂಗಳೂರು: ಜಿಎಸ್'ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್'ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ ಜಿಎಸ್'ಟಿ ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ ಎಂದು ಹೇಳಿದ್ದಾರೆ.

ನ.2025-26ರಲ್ಲಿ ಜಿಎಸ್'ಟಿ ಸಂಗ್ರಹದಲ್ಲಿ ಶೇ.2ರಷ್ಟು ಕುಸಿತ ದಾಖಲಾಗಿದೆ. ಕಳೆದ ವರ್ಷ ನವೆಂಬರ್ 2024ರಲ್ಲಿ ಜಿಎಸ್'ಟಿ ಶೇ.9.3 ಬೆಳವಣಿಗೆ ಆಗಿತ್ತು. ನಿವ್ವಳ ದೇಶೀಯ ಜಿಎಸ್'ಟಿ ಬೆಳವಣಿಗೆ ದರ ಇಳಿಕೆಯಾಗಿದೆ. ದರ ಸರಳೀಕರಣ ಬಳಿಕ 3 ತಿಂಗಳಲ್ಲಿ ಶೇ.1.7 ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.8.9 ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ರಾಜ್ಯದ ನಿವ್ವಳ ಜಿಎಸ್'ಟಿ ಸಂಗ್ರಹಣೆಯಲ್ಲಿ ಶೇ.3.1 ಬೆಳವಣಿಗೆ ಹೊಂದಿದ್ದು, ರಾಜ್ಯದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟದ ಭೀತಿ ಎದುರಾಗಿದೆ. ಈ ವರ್ಷ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆಗೆ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?