ನ್ಯಾಯಾಲಯ (ಸಂಗ್ರಹ ಚಿತ್ರ) online desk
ರಾಜ್ಯ

ರೈತನಿಗೆ ಪರಿಹಾರ ಪಾವತಿಯಲ್ಲಿ ವಿಳಂಬ: ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ

ಭೂಸ್ವಾಧೀನಕ್ಕೆ ಪರಿಹಾರವಾಗಿ 22 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿತ್ತು. ಆದರೆ, 9 ಲಕ್ಷ ರೂ.ಗಳನ್ನು ಮಾತ್ರವೇ ನೀಡಿದ್ದ ಸರ್ಕಾರ, ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿತ್ತು ಎನ್ನಲಾಗಿದೆ.

ಶಿವಮೊಗ್ಗ: ರೈತನಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ಮಂಜೂರು ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಕಾರನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ 1 ಎಕರೆ ಭೂಮಿಯನ್ನು ವಸತಿ ಯೋಜನೆಗಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು.

ಭೂಸ್ವಾಧೀನಕ್ಕೆ ಪರಿಹಾರವಾಗಿ 22 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿತ್ತು. ಆದರೆ, 9 ಲಕ್ಷ ರೂ.ಗಳನ್ನು ಮಾತ್ರವೇ ನೀಡಿದ್ದ ಸರ್ಕಾರ, ಉಳಿದ ಹಣವನ್ನು ಬಾಕಿ ಉಳಿಸಿಕೊಂಡಿತ್ತು ಎನ್ನಲಾಗಿದೆ.

ಬಾಕಿ ಪರಿಹಾರಕ್ಕಾಗಿ ರೈತ ನಂದಾಯೊಪ್ಪ ಅವರು ಜಿಲ್ಲಾಧಿಕಾರಿ ಕಚೇರಿಗೂ ಮನೆಗೂ ಅಲೆದಾಡಿ ಬಸವಳಿಸಿದ್ದರು. ಅಂತಿಮವಾಗಿ, ನ್ಯಾಯಾಲಯದ ಮೆಟ್ಟಿಲೇರಿದ್ದರು.

ಕಚೇರಿಗೂ ಮನೆಗೂ ಅಲೆದಾಡಲು ಮತ್ತು ನ್ಯಾಯಾಲಯದ ವ್ಯಾಜ್ಯಗಳಿಗಾಗಿ ಮತ್ತೊಂದು ಎಕರೆ ಜಮೀನನ್ನೂ ಕಳೆದುಕೊಂಡಿದ್ದೇನೆ. ತಮಗೆ ಸೂಕ್ತ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿರುವ 2ನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು, ರೈತನಿಗೆ 95,88,283 ರೂ. ಪರಿಹಾರ ಪಾವತಿಸುವಂತೆ ಸೂಚಿಸಿತ್ತು. ಆದರೂ, ಜಿಲ್ಲಾಧಿಕಾರಿಗಳು ರೈತನಿಗೆ ಪರಿಹಾರ ಪಾವತಿ ಮಾಡಿರಲಿಲ್ಲ.

ಜಿಲ್ಲಾಧಿಕಾರಿಯ ಈ ನಡೆಗೆ ಅಸಮಾಧಾನಗೊಂಡಿರುವ ನ್ಯಾಯಾಲಯವು, ಜಿಲ್ಲಾಧಿಕಾರಿ ಬಳಸುತ್ತಿರುವ KA14 G1234 ಕಾರು ಜಪ್ತಿ ಮಾಡುವಂತೆ ಆದೇಶಿಸಿದೆ.

ಈ ನಡುವೆ ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಅಡಿಕೆ ಬೆಳೆಗೆ ಕೊಳೆ ರೋಗ, ಎಲೆ ಚುಕ್ಕಿ ರೋಗಗಳ ನಿರ್ವಹಣೆ ಸಂಬಂಧ ಉನ್ನತ ಮಟ್ಟದ ಸಭೆ ನಡೆಯುತ್ತಿತ್ತು.

ಅದೇ ಸಂದರ್ಭದಲ್ಲಿ ನ್ಯಾಯಾಲಯದ ಅಧಿಕಾರಿಗಳುಕಾರು ಜಪ್ತಿಗಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳು ಪರಿಹಾರ ವಿತರಣೆಗೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

Video: ಮತ್ತೊಂದು ಗ್ಯಾಸ್ ಬಲೂನ್ ದುರಂತ: ಸಿಲಿಂಡರ್ ಸ್ಫೋಟ, 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ

ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಹಣ ಸಂಗ್ರಹ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ; ಬೆಂಗಳೂರು ಜನತೆಗೆ ಕುಮಾರಸ್ವಾಮಿ ಕರೆ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!