ರಾಕಿಂಗ್ ಸ್ಟಾರ್ ನಟ ಯಶ್ 
ರಾಜ್ಯ

ರಾಕಿಂಗ್ ಸ್ಟಾರ್ ಯಶ್ 'ಶೋಧಿತ ವ್ಯಕ್ತಿ' ಎಂದ ತೆರಿಗೆ ಇಲಾಖೆ: ನಟನಿಗೆ ಹೈಕೋರ್ಟ್ ರಿಲೀಫ್..!

ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ನೋಟಿಸ್ ನ್ನು ರದ್ದು ಮಾಡಿದೆ.

ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬಿಗ್ ರಿಲೀಫ್ ನೀಡಿದೆ.

ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ನೋಟಿಸ್ ನ್ನು ರದ್ದು ಮಾಡಿದೆ.

2013-14ರಿಂದ 2018-19 ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ನೀಡಿದ್ದ ನೋಟಿಸ್ ಅನ್ನು ಯಶ್ ಹೈಕೋರ್ಟ್​ ಅಲ್ಲಿ ಪ್ರಶ್ನೆ ಮಾಡಿದ್ದರು. ಈ ಅರ್ಜಿಯವನ್ನು ವಿಚಾರಣೆ ನಡೆಸಿರುವ ನ್ಯಾಯಾಲಯ, ನೋಟಿಸ್ ನ್ನು ರದ್ದು ಮಾಡಿದೆ.

ಹೊಂಬಾಳೆ ಕನ್ಸ್​​​ಟ್ರಕ್ಷನ್ಸ್​ಗೆ ಸಂಬಂಧಿಸಿ ಐಟಿ ಇಲಾಖೆ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ನಟ ಯಶ್ ವಾಸಿಸಿದ್ದ ಹೊಸಕೆರೆಹಳ್ಳಿ ಮನೆ, ಅವರು ಬಾಡಿಗೆ ಪಡೆದು ಉಳಿದುಕೊಂಡಿದ್ದ ತಾಜ್ ವೆಸ್ಟ್ ಎಂಡ್​ ರೂಮ್ ಶೋಧಿಸಿತ್ತು.

2021ರಲ್ಲಿ ನಟ ಯಶ್​​ಗೆ ಆದಾಯ ತೆರಿಗೆ ಕಾಯ್ದೆ ಸೆ.153ಸಿ ಅಡಿ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ನಟ ಯಶ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಮನೆ ಶೋಧಿಸಿದ ಬಳಿಕವೂ ‘ಶೋಧನೆ ನಡೆಸದ ವ್ಯಕ್ತಿ’ ಎಂದು ಪರಿಗಣಿಸಿ ಐಟಿ ನೋಟಿಸ್ ನೀಡಿದ್ದು ಏಕೆ ಎಂದು ಪ್ರಶ್ನಿಸಿದ ನಟ ಯಶ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

‘ತಮ್ಮ ನಿವಾಸ ಶೋಧಿಸಲಾಗಿದೆ. ಆದರೂ ಶೋಧ ನಡೆಸದೇ ಇರುವವರಿಗೆ ನೀಡುವ 153ಸಿ ನೋಟಿಸ್ ನೀಡಲಾಗಿದೆ. ಇದು ಕಾನೂನು ಬಾಹಿರವೆಂದು’ ಯಶ್ ಪರ ವಕೀಲರು ವಾದಿಸಿದ್ದಾರೆ.

ಈ ನಡುವ ಪ್ರತಿವಾದ ಮಂಡಿಸಿರುವ ತೆರಿಗೆ ಇಲಾಖೆ, ‘ಹೊಂಬಾಳೆ ಕನ್ಸ್​​​ಟ್ರಕ್ಷನ್​​​​ನ ವಿಜಯ್ ಕುಮಾರ್ ವಿರುದ್ಧ ಶೋದನೆ ವಾರಂಟ್ ಪಡೆಯಲಾಗಿತ್ತು. ಹೊಂಬಾಳೆಗೆ ಸಂಬಂಧಪಟ್ಟಂತೆ ಮಾತ್ರ ಯಶ್ ನಿವಾಸದಲ್ಲಿ ಶೋಧಿಸಲಾಗಿದೆ. ಹೀಗಾಗಿ ಯಶ್ ಶೋಧನೆಗೊಳಗಾದ ವ್ಯಕ್ತಿಯಲ್ಲ’ ಎಂದು ಐಟಿ ವಾದ ಮಾಡಿದೆ. ವಾದ ಪ್ರತಿವಾದ ಗಮನಿಸಿದ ಕೋರ್ಟ್​ ಯಶ್​​ಗೆ ಐಟಿ ಇಲಾಖೆ ಜಾರಿಗೊಳಿಸಿದ್ದ ನೋಟಿಸ್​ನ ರದ್ದು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ