ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ: ಕೇಂದ್ರ ಸರ್ಕಾರಕ್ಕೆ HDK ಪತ್ರ

ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ.

ಬೆಂಗಳೂರು: ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಕೇಂದ್ರದ ಆಡಳಿತಾರೂಢ ಮೋದಿ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈ ಸಂಬಂಧ ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಪತ್ರ ಬರೆದಿರುವ ಕುಮಾರಸ್ವಾಮಿಯವರು ಮನವಿ ಮಾಡಿದ್ದಾರೆ.

ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಹಾಗೂ ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುದೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು. ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶವನ್ನು ನೀಡಿತು. ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ. ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ.

ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo crisis|ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCAಯಿಂದ ಉನ್ನತ ಮಟ್ಟದ ಸಮಿತಿ ರಚನೆ, ಪ್ರಯಾಣಿಕರಲ್ಲಿ ಕ್ಷಮೆ ಕೇಳಿದ ಇಂಡಿಗೋ

5ನೇ ದಿನವೂ ಮುಂದುವರಿದ IndiGo ಅವಾಂತರ: ಬೆಂಗಳೂರು ಏರ್ ಪೋರ್ಟ್ ಲ್ಲಿ ಪ್ರಯಾಣಿಕರ ಗೋಳಾಟ, ಪರದಾಟ, ಫ್ಲೈಟ್ ಟಿಕೆಟ್ ದರ ದುಪ್ಪಟ್ಟು-Video

ಆರೋಗ್ಯಕ್ಕೆ ಅತಿ ಮುಖ್ಯ ಒಮೆಗಾ-3 ಕೊಬ್ಬಿನಾಮ್ಲ (ಕುಶಲವೇ ಕ್ಷೇಮವೇ)

‘Indigo ವಿಮಾನ’ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ, ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

SCROLL FOR NEXT