ಡಿ.ಕೆ ಶಿವಕುಮಾರ್ 
ರಾಜ್ಯ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: IPL ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲೂ ಆಡಿಸುವಂತೆ ಮಾಡುತ್ತೇವೆ!

ನಾನು ಕೆಎಸ್ ಸಿಎ ಸದಸ್ಯ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗಲೇ, ನಾಗರಾಜ್ ಅವರು ನನಗೆ ಸದಸ್ಯತ್ವ ನೀಡಿದರು. ಅವರ ಮಗ ನನ್ನ ಸಹಪಾಠಿ. ನನಗೆ ಬ್ರಿಜೇಶ್ ಪಟೇಲ್ ಅವರಿಂದ ಅನಿಲ್ ಕುಂಬ್ಳೆ, ಪ್ರಸನ್ನ ಸೇರಿದಂತೆ ಅನೇಕರು ಬಹಳ ಪರಿಚಯ. ನನಗೆ ಬೇಕಾದವರಿಗೆ ನಾನು ಮತ ಹಾಕಿದ್ದೇನೆ ಎಂದರು.

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ದುರ್ಘಟನೆ ಬಳಿಕ ಐಪಿಎಲ್ ಸೇರಿದಂತೆ ಪ್ರಮುಖ ಪಂದ್ಯಗಳು ಈ ಕ್ರೀಡಾಂಗಣದಿಂದ ಸ್ಥಳಾಂತರವಾಗಿರುವ ಬಗ್ಗೆ ಕೇಳಿದಾಗ, "ಇದು ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಗೌರವದ ವಿಚಾರ.

ಮುಂದಿನ ಐಪಿಎಲ್ ಪಂದ್ಯಗಳನ್ನು ಇಲ್ಲೇ ನಡೆಸುವಂತೆ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಯಾವೆಲ್ಲಾ ಪಂದ್ಯಗಳಿವೆಯೋ ಅದಕ್ಕೆ ಅವಕಾಶ ನೀಡುತ್ತೇವೆ" ಎಂದು ತಿಳಿಸಿದರು.

ನಾನು ಕೆಎಸ್ ಸಿಎ ಸದಸ್ಯ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗಲೇ, ನಾಗರಾಜ್ ಅವರು ನನಗೆ ಸದಸ್ಯತ್ವ ನೀಡಿದರು. ಅವರ ಮಗ ನನ್ನ ಸಹಪಾಠಿ. ನನಗೆ ಬ್ರಿಜೇಶ್ ಪಟೇಲ್ ಅವರಿಂದ ಅನಿಲ್ ಕುಂಬ್ಳೆ, ಪ್ರಸನ್ನ ಸೇರಿದಂತೆ ಅನೇಕರು ಬಹಳ ಪರಿಚಯ. ನನಗೆ ಬೇಕಾದವರಿಗೆ ನಾನು ಮತ ಹಾಕಿದ್ದೇನೆ ಎಂದರು.

ನಾನು ಕ್ರಿಕೆಟ್ ಅಭಿಮಾನಿ. ಇತ್ತೀಚಿಗೆ ಆಗಿರುವ ಅನಾಹುತ ಮುಂದೆ ಮರುಕಳಿಸದಂತೆ ಎಚ್ಚರಿಕೆ ವಹಿಸಿ ಕ್ರೀಡಾಂಗಣದ ಗೌರವ ಉಳಿಯುವಂತೆ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಜನದಟ್ಟಣೆ ನಿಭಾಯಿಸಿಕೊಂಡು ಕ್ರೀಡಾಂಗಣ ಬೆಳೆಸಲಾಗುವುದು. ಇದರ ಜೊತೆಗೆ ಪರ್ಯಾಯವಾಗಿ ದೊಡ್ಡ ಕ್ರೀಡಾಂಗಣವನ್ನು ನಿರ್ಮಾಣ ಮಾಡುತ್ತೇವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

'ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು: SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'

'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ!-Video

ಅಳಿವಿನಂಚಿನ ‘ಗೋಡಾವಣ’ಕ್ಕೆ ಮರುಜೀವ: ಜೈಸಲ್ಮೇರ್‌ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ-Video

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!