ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜ್ಯ

ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ: ಮಹದೇವಪ್ಪನವರದು ಕಂಸ ಮಾರ್ಗವೇ? ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?

ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಸಚಿವ ಎಚ್.ಸಿ ಮಹಾದೇವಪ್ಪ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ; ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ 'ಮಾರ್ಗ' ಯಾವುದು? ಕಂಸ ಮಾರ್ಗವೇ ಎಂದಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

ಕರ್ನಾಟಕದ 2.5 ಲಕ್ಷ ಹುದ್ದೆಗಳು ಖಾಲಿ: ಹಣಕಾಸಿನ ಒತ್ತಡ, ಕಾನೂನು ಅಡೆತಡೆಗಳು.. ಹೆಚ್ಚುತ್ತಿರುವ ಯುವಜನರ ಕೋಪ!

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ, ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!

ಪರಪ್ಪನ ಅಗ್ರಹಾರ: ಸಹ ಕೈದಿಗೆ ನಟ ದರ್ಶನ್ ಕಿರುಕುಳ?, ಸೆಲ್ ಬಳಿ ಕಟ್ಟೆಚ್ಚರ!: ವರದಿ

SCROLL FOR NEXT