ಕರಿಯಪ್ಪ ಹಾಗೂ ಕವಿತಾ 
ರಾಜ್ಯ

ಕೊಪ್ಪಳ: ಬೈಕ್​ಗೆ ಲಾರಿ ಡಿಕ್ಕಿ; ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಸಾವು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.

ಗಂಗಾವತಿ: ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಮನೆಗೆ ಮರಳುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.

ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಈ ಜೋಡಿ ಪ್ರಿ ವೆಡ್ಡಿಂಗ್ ಫೋಟೋಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದೆ.

5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿಗೆ ಡಿಸೆಂಬರ್ 21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯಕ್ಕೆ ಹೋಗಿ, ವಾಪಸ್ ಬರುತ್ತಿದ್ದರು. ಈ ವೇಳೆ ಕ್ವಾರಿಯ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕವಿತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಕರಿಯಪ್ಪ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!