ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ (ಸಂಗ್ರಹ ಚಿತ್ರ) 
ರಾಜ್ಯ

ಪರಪ್ಪನ ಅಗ್ರಹಾರ: ಸಹ ಕೈದಿಗೆ ನಟ ದರ್ಶನ್ ಕಿರುಕುಳ?, ಸೆಲ್ ಬಳಿ ಕಟ್ಟೆಚ್ಚರ!

ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲಿಗೆ ಮರಳಿರುವ ನಟ ದರ್ಶನ್ ಸಹ ಕೈದಿಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜೈಲಿನಲ್ಲೂ ಯಡವಟ್ಟು ಮಾಡಿಕೊಂಡಿದ್ದು, ಸಹ ಕೈದಿಗೆ ಥಳಿಸಿದ್ದಾರೆ ಎಂದು ವರದಿಯಾಗಿದೆ.

ಸುದ್ದಿಮಾಧ್ಯಮವೊಂದು ಈ ಕುರಿತು ವರದಿ ಮಾಡಿದ್ದು, ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲಿಗೆ ಮರಳಿರುವ ನಟ ದರ್ಶನ್ ಸಹ ಕೈದಿಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದ್ದು, ದೊಡ್ಡ ಜಗಳಗಳು ನಡೆದಿವೆ ಎಂದು ವರದಿ ಮಾಡಿದೆ.

ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ಕುರಿತು ಮಾಧ್ಯಮಗಳು ಸುದ್ದಿ ಮಾಡುತ್ತಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅಕ್ರಮಗಳಿಗೆ ಬ್ರೇಕ್ ಹಾಕಿದ್ದಾರೆ. ಈಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಕಠಿಣವಾಗಿದ್ದು,ಈ ನಿಯಮಗಳಿಂದ ನಟ ದರ್ಶನ್ ತತ್ತರಿಸಿಹೋಗಿದ್ದಾರಂತೆ. ಮಾನಸಿಕ ಒತ್ತಡಕ್ಕೆ ಒಳಗಾಗಿ ನಟ ದರ್ಶನ್ ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ತೀವ್ರ ನಿಗಾದಲ್ಲಿ ದರ್ಶನ್, ಕಠಿಣ ನಿಯಮ

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.

ದರ್ಶನ್ ಸಹ ಕೈದಿಗಳಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿಗಳು

ಇನ್ನು ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ ಅಲ್ಲಿ ಜೈಲು ಸೇರಿದವರಾಗಿದ್ದಾರೆ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ‌ ದೊಡ್ಡ ಜಗಳ ನಡೆದಿದ್ದು, ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಇಲ್ಲೇ ಇದ್ರೆ ಸಾಯ್ತೀನಿ.. ದುರ್ಗದ ಜೈಲಿಗೆ ಶಿಫ್ಟ್ ಮಾಡಿ ಎಂದ ಅನುಕುಮಾರ್

ವಕೀಲರ ನೇಮಕ ವಿಚಾರವಾಗಿಯೂ ಎಲ್ಲರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೇ ನಾನು ಇಲ್ಲೆ ಇದ್ದರೆ ಸಾಯೋದಾಗಿ ಅನುಕುಮಾರ್ ಹೇಳಿಕೊಂಡಿದ್ದಾರಂತೆ. ಅನುಕುಮಾರ್​ಗೆ ಜಾಮೀನು ಸಿಗುತ್ತಿಲ್ಲ ಎಂಬುದು ಒಂದು ಕಡೆಯಾದರೆ, ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ಹೀಗಾಗಿ, ದರ್ಶನ್ ಸೆಲ್​ ಮೇಲೆ ವಿಶೇಷ ಕಾಳಜಿ ಇಡಲಾಗಿದೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.

ಅಂದಹಾಗೆ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲಿಗೆ ಮರಳಿದ್ದಾರೆ. ಆರಂಭದಲ್ಲಿ ಜಾಮೀನು ಪಡೆದು ಹಾಯಾಗಿ ಹೊರಗೆ ಸುತ್ತಾಡಿಕೊಂಡಿದ್ದ ಅವರು ಸುಪ್ರೀಂಕೋರ್ಟ್ ಬೇಲ್ ರದ್ದು ಮಾಡುತ್ತಿದ್ದಂತೆ ಮರಳಿ ಜೈಲು ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!

ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್‌ಡೇ ಪಾರ್ಟಿಗೆ ಕರೆದು ರೇಪ್‌ಗೆ ಯತ್ನಿಸಿ, ಕೊಲೆ ಆರೋಪ!

ಸನಾತನ ಧರ್ಮ ಟೀಕಿಸಿದ್ದ ವ್ಯಕ್ತಿಯ ಬಂಧನವಾಗಿದೆ: ಉದಯನಿಧಿ ಸ್ಟಾಲಿನ್​​​ಗೆ ಕುಟುಕಿದ BJP

ಸರ್ಕಾರಿ ಸ್ವಾಮ್ಯದ LIC ಸಂಸ್ಥೆಯಲ್ಲಿ ಶೇ.6.5 ರಷ್ಟು ಪಾಲು ಮಾರಾಟ; $3.3 ಬಿಲಿಯನ್ ಸಂಗ್ರಹ ಗುರಿ; ಪ್ರತಿ ಷೇರಿನ ಬೆಲೆ ಎಷ್ಟು ಗೊತ್ತೆ?