ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಸೇತುವೆಯಿಂದ ಕೆಳಗೆ ಬಿದ್ದ ಕಾರು; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ. ನಾಗತಿಹಳ್ಳಿ ನಡುವೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಅಪಘಾತ ಸಂಭವಿಸಿದೆ.

ಮಂಡ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ. ನಾಗತಿಹಳ್ಳಿ ನಡುವೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಅಪಘಾತ ಸಂಭವಿಸಿದೆ.

ಮೃತರನ್ನು ಸರೋಜಮ್ಮ(38), ಅವರ ಪತಿ ಸಿದ್ದೇಗೌಡ(45) ಮತ್ತು ಸಾವಿತ್ರಮ್ಮ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಚಿಕ್ಕಮಗಳೂರಿನವರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಬಿಂಡಿಗನವಿಲೆ ಪೊಲೀಸ್ ಠಾಣೆಯ ಪಿಎಸ್ಐ ಮಾರುತಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಸಿದ್ದೇಗೌಡ ಮತ್ತು ಸರೋಜಮ್ಮ ಅವರ ಶವಗಳನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ನಂತರ, ಕಾರು ಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಹತ್ತಿರದ ಪೊದೆಗಳಲ್ಲಿ ಸಾವಿತ್ರಮ್ಮ ಅವರ ಶವ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅದೇ ಆಸ್ಪತ್ರೆಗೆ ಕಳುಹಿಸಲಾಗಿದೆ.

ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಇ ಸಿ ತಿಮ್ಮಯ್ಯ, ಡಿವೈಎಸ್ಪಿ ಬಿ ಚಲುವರಾಜು, ಸಿಪಿಐ ಹೇಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ?: BJP ವಿರುದ್ಧ ಸಿದ್ದರಾಮಯ್ಯ ಕಿಡಿ

'ಮದುವೆ ಮನೆಯಲ್ಲಿ ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್​​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್: ಭಾರತೀಯ ಮಹಿಳಾ ಕ್ರಿಕೆಟಿಗರು ಆತನನ್ನು ಥಳಿಸಿದ್ದರು'

ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ ಬದಲಿಸಿದ ಅಮೆರಿಕ: ಇಂಡೋ-ಪೆಸಿಫಿಕ್‌ಗೆ ಮೊದಲ ಆದ್ಯತೆ; ಯುರೋಪ್‌ ಅನ್ನು ದೂರವಿಟ್ಟ ಟ್ರಂಪ್!

T20 World cup: ಬಾಂಗ್ಲಾವನ್ನು ಹೊರಗಿಟ್ಟಿದ್ದು 'ಅನ್ಯಾಯ', ಟೂರ್ನಿಯಲ್ಲಿ ನಾವು ಆಡಲ್ಲ?; ICCಗೆ ಪಾಕಿಸ್ತಾನ ಧಮ್ಕಿ!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

SCROLL FOR NEXT