ಸಂಗ್ರಹ ಚಿತ್ರ 
ರಾಜ್ಯ

ST ವರ್ಗ ಸೇರ್ಪಡೆಗೆ ಆಗ್ರಹ: ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ.

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಎಸ್‌ಟಿ ಹೋರಾಟ ಸಮಿತಿ ಸೇರಿದಂತೆ ಇದರೆ ಹಲವಾರು ಕುರುಬ ಸಮುದಾಯದ ಸಂಘಟನೆಗಳು ತಿಳಿಸಿವೆ.

ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ಮಾತನಾಡಿ, ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ. ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಬೇಕೆಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ" ಎಂದು ಹೇಳಿದರು.

ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಕೊಡಗು ಮತ್ತು ಬೀದರ್ ಜಿಲ್ಲೆಗಳಲ್ಲಿ, ಕುರುಬರು ಎಸ್‌ಟಿ ಸ್ಥಾನಮಾನ ಮತ್ತು ಮೀಸಲಾತಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ, ಆದರೆ ಉಳಿದ ಭಾಗಗಳಲ್ಲಿ 2A, ಒಬಿಸಿ ವರ್ಗದಲ್ಲಿಯೇ ಉಳಿದಿದ್ದೇವೆ. ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಸಮುದಾಯವನ್ನು ಎಸ್‌ಟಿ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಎಸ್‌ಸಿ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್